ಪೌರಕಾರ್ಮಿಕರ ಆರೋಗ್ಯ ಸ್ಥಿತಿ ಬಗ್ಗೆ ಗಮನ ಹರಿಸಿ
ಕ.ಪ್ರ.ವಾರ್ತೆ ಕನಕಪುರ ಡಿ.4
ಸಮಾಜದ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರವಹಿಸುವ ಪೌರಕಾರ್ಮಿಕರ ಆರೋಗ್ಯ ಪರಿಸ್ಥಿತಿ ಬಗ್ಗೆ ಸ್ಥಳೀಯ ಸಂಸ್ಥೆಗಳು ಗಮನ ಹರಿಸಬೇಕು. ಪೌರಕಾರ್ಮಿಕರಿಗೆ ಅಗತ್ಯ ಸಲಕರಣೆ ಹಾಗೂ ಸಂರಕ್ಷಣಾ ಉಪಕರಣಗಳನ್ನು ಒದಗಿಸಬೇಕು ಎಂದು ವಿಪ ಮಾಜಿ ಸದಸ್ಯ ಎಸ್. ರವಿ ಹೇಳಿದ್ದಾರೆ.
ಅವರು ಕನಕಪುರದ ರೋಟರಿ ಭವನದಲ್ಲಿ ಬೆಂಗಳೂರಿನ ಬಿಜಿಎಸ್ ಗ್ಲೊಬಲ್ ಆಸ್ಪತ್ರೆ ಸಹಯೋಗದಲ್ಲಿ ಪೌರ ಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರಿಗಾಗಿ ಆಯೋಜಿಸಿದ್ದ ಮೆಗಾ ಆರೋಗ್ಯ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.
ಬಿಜಿಎಸ್ ಆಸ್ಪತ್ರೆಯ ಸಿಇಓ ಪೀಟರ್ ಕೆನಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಮಾರು 300 ಮಂದಿ ಪೌರಕಾರ್ಮಿಕರಿಗೆ ಸಾಮಾನ್ಯ ಆರೋಗ್ಯ ತಪಾಸಣೆ, ಹೃದಯ ರೋಗ, ನೇತ್ರ ತಪಾಸಣೆ,
ಸ್ತ್ರೀ, ಮಕ್ಕಳ ಆರೋಗ್ಯ, ಚರ್ಮರೋಗ, ಕಿವಿ ಮೂಗು ಗಂಟಲು ತಪಾಸಣೆಗಳನ್ನು ತಜ್ಞವೈದ್ಯರು ನೆರವೇರಿಸಿದರು. ಅಗತ್ಯವಿದ್ದವರಿಗೆ ಉಚಿತ ಔಷಧಗಳನ್ನು ವಿತರಿಸಲಾಯಿತು.
ಪುರಸಭಾ ಮುಖ್ಯಾಧಿಕಾರಿ ಮಾಯಣ್ಣಗೌಡ ಮಾತನಾಡಿ, ಪೌರಕಾರ್ಮಿಕರ ದಿನಾಚರಣೆ ಔಪಚಾರಿಕವಾಗಬಾರದು. ನೌಕರರನ್ನು ಪ್ರೀತಿಯಿಂದ ಕಂಡು ಅವರಿಗೆ ಅಗತ್ಯ ಸವಲತ್ತುಗಳನ್ನು ಒದಗಿಸುವಲ್ಲಿ ಪೌರಾಡಳಿತ ಸಂಸ್ಥೆಗಳು ಆಸಕ್ತಿ ವಹಿಸಬೇಕು. ನಾವು ಪೌರಕಾರ್ಮಿಕರನ್ನು ಗೌರವದಿಂದ ಕಂಡಾಗ ಅವರೂ ಕೂಡಾ ಶ್ರಮವಹಿಸಿ ದುಡಿಯುತ್ತಾರೆ. ಪಟ್ಟಣದ ನೈರ್ಮಲ್ಯತೆ ಕಾಪಾಡಲು ಕಾರಣರಾಗುತ್ತಾರೆ ಎಂದು ಹೇಳಿದರು. ಕಾರ್ಯಕ್ರಮದ ಉಸ್ತುವಾರಿಯನ್ನು ಅಭಿಯಂತರ ನರಸು ಕಳಂತ್ರಿ, ರಾಮಚಂದ್ರಯ್ಯ, ಶಿವರುದ್ರಯ್ಯ, ರಾಮದಾಸು, ಲತಾ, ಪ್ರಮೀಳಾ ವಹಿಸಿದ್ದರು. ಪುರಸಭಾ ಮಾಜಿ ಅಧ್ಯಕ್ಷರಾದ ಆರ್. ಕೃಷ್ಣಮೂರ್ತಿ, ಬಿ. ನಾಗರಾಜು ಅತಿಥಿಗಳಾಗಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

