ಬೆಂಗಳೂರು ಗ್ರಾಮಾಂತರ

ಮೇಲ್ಸೇತುವೆ ನಿರ್ಮಿಸಿ, ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ

Published On :

ಮಾಗಡಿ: ಮೇಲ್ಸೇತುವೆ ನಿರ್ಮಿಸಿ, ಸುಗಮ ರಸ್ತೆ ಸಂಚಾರಕ್ಕೆ ಅಗತ್ಯ ಕ್ರಮ ವಹಿಸುವಂತೆ ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.
ತಾಲೂಕಿನ  ರಾಷ್ಟ್ರೀಯ ಹೆದ್ದಾರಿ 48 ರ ಮರೂರು ಹ್ಯಾಂಡ್ ಪೋಸ್ಟ್ ವೃತ್ತದಲ್ಲಿ ರಸ್ತೆ ಸಂಚಾರ ತೀವ್ರಗೊಂಡಿದ್ದು, ಶಾಲಾ ಮಕ್ಕಳು, ವಯೋವೃದ್ಧರು ಹೆದ್ದಾರಿ  ರಸ್ತೆ ದಾಟಲಾಗದೆ ಅಪಘಾತದ ಆತಂಕ ವ್ಯಕ್ತಪಡಿಸಿದ್ದಾರೆ. ಇಲ್ಲಿ ಯಾವುದೇ ಸಂಚಾರ ಸೂಚನಾ ನಾಮ ಫಲಕವಿಲ್ಲ. ಸಿಗ್ನಲ್ ಲ್ಲೈಟ್ ಅಳವಡಿಸಿಲ್ಲದ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 48 ರ ಮರೂರು ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ನಿತ್ಯ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಿವೆ. ವರ್ಷದಿಂದೀಚೆಗೆ ಲೆಕ್ಕವಿಲ್ಲದಷ್ಟು ಅಪಘಾತಗಳು ನಡೆದಿವೆ. ಇಲ್ಲಿ ನಾಲ್ಕು ಕಡೆಯಿಂದಲೂ ರಸ್ತೆಯಿದ್ದು, ಯಾವ ಮಾರ್ಗದಿಂದ ವಾಹನಗಳು ಬರುತ್ತಿವೆ ಎಂದು ಗಮನಿಸಲಾಗುತ್ತಿಲ್ಲ ಈ ಸಂಬಂಧ ಸುಗಮ ಸಂಚಾರಕ್ಕೆ ಅಗತ್ಯ ಅನುಕೂಲ ಕಲ್ಪಿಸುವಂತೆ ಸಾರಿಗೆ ಸಚಿವರಲ್ಲಿ ಮನವಿ ಮಾಡಿದ್ದಾಗಿ ಎಂ.ಎಚ್. ಸುರೇಶ್, ರಾಜಣ್ಣ, ಮರಿಗೌಡ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.