ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ ತಾಲೂಕು ಕೆಜೆಪಿ ಅಧ್ಯಕ್ಷರಾಗಿ ಮಂಜಣ್ಣ ಆಯ್ಕೆ

Published On :

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ಜನತಾ ಪಕ್ಷದ ಕಾರ್ಯಕರ್ತರ ಸಭೆ ಜಿಲ್ಲಾಧ್ಯಕ್ಷ ಜೋ.ನಾ.ಮಲ್ಲಿಕಾರ್ಜುನ್ ಅಧ್ಯಕ್ಷತೆಯಲ್ಲಿ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ್ ಮಾತನಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೆಜೆಪಿ  ಸಂಘಟನೆ ಮಾಡುವ ದೃಷ್ಟಿಯಿಂದ ಎಲ್ಲ ತಾಲೂಕುಗಳ ಮತ್ತು ಹೋಬಳಿ ಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದರಲ್ಲದೆ ಈಗಿನ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆ ಹೆಸರಿನಲ್ಲಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದರು. ಪಕ್ಷದ ಮುಖಂಡರಾಗಿರುವ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ಯಾವುದೇ ಯೋಜನೆ ಒಂದು ಜಾತಿಗೆ ಸೀಮಿತವಾಗಿರಲಿಲ್ಲ, ಎಲ್ಲ ಜಾತಿ ಬಡವರಿಗಾಗಿ ಅನ್ವಯವಾಗುತ್ತಿತ್ತು ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಘಟಕ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ ನಮ್ಮ ಪಕ್ಷ ರಾಜಕೀಯವಾಗಿ ಬೆಳೆಯಬೇಕಾದರೆ ಪಕ್ಷದಲ್ಲಿ ಸಂಘಟನೆ ಮುಖ್ಯವಾಗಿರುತ್ತದೆ. ಆದ್ದರಿಂದ ಇನ್ನು ಮುಂದಿನ ದಿನಗಳಲ್ಲಿ ತಾಲೂಕು ಮತ್ತು ಹೋಬಳಿ ಮಟ್ಟದ ಪದಾಧಿಕಾರಿಗಳು ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ನಟರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸು, ರೈತ ಘಟಕ ಅಧ್ಯಕ್ಷ ರುದ್ರೇಶ್ ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕದ ಕಾರ್ಯಕರ್ತರು ಭಾಗವಹಿಸಿದ್ದರು.
ದೇವನಹಳ್ಳಿ ತಾಲೂಕು ಘಟಕಕ್ಕೆ ಸುಣ್ಣಘಟ್ಟ ಮಂಜಣ್ಣ- ಅಧ್ಯಕ್ಷ, ವಿಜಯಪುರ ವೆಂಕಟೇಶ್ವರರಾವ್-ಉಪಾಧ್ಯಕ್ಷ, ಶಾಮ ಸುಂದರ್- ಪ್ರಧಾನ ಕಾರ್ಯದರ್ಶಿ, ತೂಬಗೆರೆ ಹೋಬಳಿಗೆ ಜಗನ್ನಾಥ್- ಅಧ್ಯಕ್ಷ, ರಮೇಶ್ - ಉಪಾಧ್ಯಕ್ಷ, ಎಸ್ಸಿ ಮತ್ತು ಎಸ್ಟಿ ಘಟಕಕ್ಕೆ ಓಬಳೇಶ್- ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.