ಸುದ್ದಿ ಸಂಕ್ಷೇಪ
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಯತ್ನ
ಮಾಗಡಿ: ಬೇಸಿಗೆ ಕಾಲ ಸಮೀಪಿಸುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಕೆ.ಮುದ್ದುರಾಜ ಯಾದವ್ ತಿಳಿಸಿದರು. ಅವರು ತಾಲೂಕಿನ ತಗ್ಗೀಕುಪ್ಪೆ ಗ್ರಾಮದಲ್ಲಿ ನೂತನವಾಗಿ ಕೊರೆಸಲಾಗಿದ್ದ ಕೊಳವೆ ಬಾವಿಯ ಮೋಟರ್ ಬಟನ್ ಒತ್ತುವ ಮೂಲಕ ಕುಡಿಯುವ ನೀರಿಗೆ ಚಾಲನೆ ನೀಡಿ ಮಾತನಾಡುತ್ತಾ ತಗ್ಗೀಕುಪ್ಪೆ ಗ್ರಾಮಕ್ಕೆ ಮೂರು ಕೊಳವೆ ಬಾವಿಯನ್ನು ಕೊರೆಸಿದ್ದೇನೆ. ಉತ್ತಮ ನೀರಿದ್ದು, ಗ್ರಾಮಕ್ಕೆ ಅಗತ್ಯ ನೀರು ಪೂರೈಕೆಗೆ ಸೂಕ್ತ ಕ್ರಮ ಕೈಗೊಂಡಿದ್ದೇನೆ. ಈ ನಿಟ್ಟಿನಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ದುಡಿದಿದ್ದೇನೆ ಎಂದರು. ತಗ್ಗೀಕುಪ್ಪೆ ಗ್ರಾ.ಪಂ.ಅಧ್ಯಕ್ಷೆ ಹನುಮಕ್ಕ ಲಕ್ಷ್ಮಯ್ಯ, ಗ್ರಾಮದ ಹಿರಿಯರಾದ ಕೃಷ್ಣಮೂರ್ತಿ, ಯುವ ಮುಖಂಡ ರವಿಕುಮಾರ್, ಕೃಷ್ಣಪ್ಪ, ಟಿ.ಕೆ. ರಾಮು, ಪಿಡಿಓ ವಿರುಪಾಕ್ಷಯ್ಯ, ನಾಗರಾಜು ಇತರರು ಇದ್ದರು.
ಸರ್ಕಾರಿ ನೌಕರರ ಕ್ರೀಡಾಕೂಟ
ಹೊಸಕೋಟೆ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಡಿ.10ಮತ್ತು ಡಿ.11ರಂದು ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಏರ್ಪಡಿಸಲಾಗಿದೆ. ತಾಲೂಕು ಹಂತದಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಸರಕಾರಿ ನೌಕರರು ಇದರಲ್ಲಿ ಪಾಲ್ಗೊಳ್ಳಬಹುದು. ಕ್ರೀಡಾಕೂಟದಲ್ಲಿ ಭಾಗವಹಿಸಲು ಅಧಿಕಾರಿಗಳು ಮತ್ತು ನೌಕರರಿಗೆ ಸರಕಾರಿ ಆದೇಶದಂತೆ ಭತ್ಯೆ ಹಾಗೂ ಅನ್ಯಕಾರ್ಯ ನಿಮಿತ್ತ ಸೌಲಭ್ಯ ಸಹ ಇರುತ್ತದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆಯ ಪ್ರಧಾನ ಕಾರ್ಯದರ್ಶಿ ಎಂ. ನರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಹೊಸಕೋಟೆ: ತಾಲೂಕು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜ.12ರಂದು ಶರಣ ಮೇಳ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ (3ಬಿ)ವರ್ಗಕ್ಕೆ ಸೇರಿದ 2013 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕೂ ಮೇಲ್ಪಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಯೋಜಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿಯ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಕ್ಕೆ ನಾಗರಾಜ್, ಮೊ.9611448737, ಕೆ.ಸಿ.ಶಿವಕುಮಾರ್, ಬಿಇಒ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಸಂಘದ ಅಧ್ಯಕ್ಷ ಡಿ. ಎಸ್.ರಾಜಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

