ಸಂಘಗಳು ಜನಮುಖಿ ಕೆಲಸ ಮಾಡಲಿ
ಕ.ಪ್ರ.ವಾರ್ತೆ ರಾಮನಗರ ಡಿ.6
ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭಾವಂತ ಕಲಾವಿದರಿದ್ದು, ಸೂಕ್ತ ಅವಕಾಶ ಸಿಗದೆ ಅವರಲ್ಲಿನ ಕಲೆ ಕಮರಿ ಹೋಗುತ್ತಿದೆ ಈ ನಿಟ್ಟಿನಲ್ಲಿ ಸಂಘ-ಸಂಸ್ಥೆಗಳು ಜನಮುಖಿ ಕೆಲಸ ಮಾಡಬೇಕು ಎಂದು ಜಾನಪದ ಲೋಕ ಕ್ಯುರೇಟರ್ ಡಾ.ಕುರುವ ಬಸವರಾಜು ಹೇಳಿದರು.
ತಾಲೂಕಿನ ಕೂನಮುದ್ದನಹಳ್ಳಿಯಲ್ಲಿ ನಡೆದ 'ಮಾತೃಭೂಮಿ' ಯುವಕ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಕಲೆ ಹಾಗೂ ಸಂಸ್ಕೃತಿ ಸಂರಕ್ಷಿಸಿ, ಬೆಳೆಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಬೇಕು ಎಂದರು.
ಸಂಘ-ಸಂಸ್ಥೆಗಳು ಯಾವುದೇ ಫಲಾಪೇಕ್ಷೆ ಇಲ್ಲದೆ ಸಮಾಜಮುಖಿ ಕೆಲಸಗಳನ್ನು ಮಾಡಬೇಕು. ಸಮಾಜದಲ್ಲಿರುವ ಅಸಮಾನತೆ, ಮೌಢ್ಯತೆ, ಜಾತೀಯತೆಗಳನ್ನು ಹೋಗಲಾಡಿಸಲು ಶ್ರಮಿಸಬೇಕು. ಗ್ರಾಮೀಣ ಭಾಗದಲ್ಲಿ ಹೆಚ್ಚು ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ನಾವೇ ಪ್ರಾತಿನಿಧ್ಯ ನೀಡುತ್ತಿಲ್ಲ: ನಮ್ಮ ನಾಡಿನ ಸಂಸ್ಕೃತಿ, ಕಲೆಗಳಿಗೆ ವಿದೇಶಗಳಲ್ಲಿ ಮನ್ನಣೆ ದೊರೆಯುತ್ತಿದೆ. ಆದರೆ, ನಾವೇ ನಮ್ಮ ಕಲೆಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಕಲೆಗಳು ಇಂದಿಗೂ ಜೀವಂತಿಕೆ ಉಳಿಸಿಕೊಂಡಿವೆ. ಟ್ರಸ್ಟ್ಗಳು ಗ್ರಾಮಗಳನ್ನು ದತ್ತು ತೆಗೆದುಕೊಂಡು ಕಲೆ, ಸಂಸ್ಕೃತಿಯನ್ನು ಉಳಿಸಲು ಮುಂದಾಗಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಸಂಚಾಲಕ ಎಸ್.ಬಾಲಾಜಿ ಕರೆ ನೀಡಿದರು.
ಸಂಘ-ಸಂಸ್ಥೆಗಳು ಅಸ್ತಿತ್ವಕ್ಕೆ ಬಂದ ಮೇಲೆ ನಿರಂತರವಾಗಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಇವುಗಳಿಂದ ವಿಮುಖವಾಗುತ್ತಿರುವ ಯುವ ಸಮುದಾಯದ ಗಮನ ಸೆಳೆಯುವಂತಹ ಕಾರ್ಯಕ್ರಮಗಳನ್ನು ರೂಪಿಸುವುದರ ಜತೆಗೆ ಅಳಿವಿನ ಅಂಚಿನಲ್ಲಿರುವ ಜಾನಪದ ಕಲೆಗಳನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನ ಅಗತ್ಯ ಎಂದು ಕರ್ನಾಟಕ ವೀರಶೈವ ಪರಿಷತ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಕೂನಮುದ್ದನಹಳ್ಳಿ ರುದ್ರೇಶ್ ತಿಳಿಸಿದರು. ಸ್ಥಳೀಯ ಕಲಾವಿದರು ಜನಪದ ಗೀತೆಗಳನ್ನು ಹಾಡಿದರು. ಶಿಕ್ಷಕ ಟಿ.ಗಂಗಾಧರ್, ಮುಖಂಡರಾದ ವೆಂಕಟನರಸಯ್ಯ, ಶಿವಣ್ಣ, ನಂಜಪ್ಪ, ಕೆ.ವಿ.ಸಿದ್ದವೀರಯ್ಯ, ಹೊನ್ನಮಲ್ಲೇಗೌಡ, ಶಿವಕುಮಾರ್, ಶಾಂತಲಿಂಗಸ್ವಾಮಿ, ನಾಗೇಶ್, ಮಲ್ಲೇಗೌಡ, ಮಹದೇವಮ್ಮ, ಉಷಾ, ತಾಯಕ್ಕ, ಮಾದಮ್ಮ, ಚಿಕ್ಕತಾಯಮ್ಮ, ಮಾತೃ ಭೂಮಿ ಯುವಕ ಸಂಘದ ಅಧ್ಯಕ್ಷ ಕೆ.ಎಸ್. ಪ್ರದೀಪ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

