'ಸಮಸ್ಯೆ ನಿವಾರಣೆಗೆ ಪುರಸಭೆ ಮುಂದಾಗಲಿ'
ವಿಜಯಪುರ: ಪಟ್ಟಣದ ಬಸ್ ನಿಲ್ದಾಣವಾಗಲಿ, ವಾಣಿಜ್ಯ ಪೇಟೆಗಳ ರಸ್ತೆಗಳಾಗಲಿ ಅಥವಾ ಶುಕ್ರವಾರ ಸಂತೆಯ ಪ್ರದೇಶವಾಗಲಿ 30-40ವರ್ಷಗಳಿಂದಲೂ ಯಥಾ ಸ್ಥಿತಿಯಲ್ಲಿದ್ದು, ಜನ ಸಂಖ್ಯೆ ಹಾಗೂ ವಾಹನ ದಟ್ಟಣೆಗೆ ಅನುಗುಣವಾಗಿ ಯಾವುದೇ ರೀತಿಯ ಬದಲಾವಣೆ ಕಂಡಿಲ್ಲ.
ಈ ನಿಟ್ಟಿನಲ್ಲಿ ಸಮಸ್ಯೆ ಪರಿಹರಿಸಲು ಪುರಸಭೆ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ನಮ್ಮೊಂದಿಗೆ ಸಹಕರಿಸಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್‌ಕುಮಾರ್ ತಿಳಿಸಿದರು.
ಇಲ್ಲಿನ ಪುರಸಭೆ ಸಭಾಂಗಣದಲ್ಲಿ ನಡೆದ ಪೊಲೀಸರು ಹಾಗೂ ಪುರಸಭಾ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ಹರಿಜನ ಕುಂಟೆಯ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಸರಕು ಸಾಗಣೆ ವಾಹನಗಳನ್ನು ನಿಲ್ಲಿಸಲು ಅವಕಾಶ ಕಲ್ಪಿಸಿದರೆ ಬಸ್ ನಿಲ್ದಾಣದಲ್ಲಿ ವಾಹನ ದಟ್ಟಣೆ ವಿರಳವಾಗುತ್ತದೆ ಎಂದು ತಿಳಿಸಿದರು.
ಪುರಸಭಾ ಸದಸ್ಯರಾದ ಸತೀಶ್‌ಕುಮಾರ್, ಬಲಮುರಿ ಶ್ರೀನಿವಾಸ್ ಹಾಗೂ ಜೆ.ಎನ್.ಶ್ರೀನಿವಾಸ್ ಮಾತನಾಡಿ, ಪಟ್ಟಣದ ಸ್ವಾಗತ ಫಲಕ ಹಾಗೂ ನಾಗರಬಾವಿ ಬಳಿ ರಸ್ತೆ ಹಂಪ್‌ಗಳನ್ನು ನಿರ್ಮಿಸಬೇಕು. ಪ್ರತಿ ದಿನ ವಾರ್ಡುಗಳಿಗೆ ಆರಕ್ಷಕ ಸಿಬ್ಬಂದಿ ಬೀಟ್ ಮಾಡುವುದು ಸೂಕ್ತ ಎಂದು ತಿಳಿಸಿದರು. ಬೈಪಾಸ್ ರಸ್ತೆ ಹಾಗೂ ಶಾಲಾ ಆಟದ ಮೈದಾನದಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು, ಇದರ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು. ಮುಂದಿನ ದಿನಗಳಲ್ಲಿ ಮನೆಗಳ ಬಳಿಯಿರುವ ಕಸಾಯಿ ಖಾನೆಗಳ ತೆರವಿಗೆ ಸಂಭಂಧ ಪಟ್ಟವರೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಲಾಯಿತು. ಸಭೆಯಲ್ಲಿ ಎಲ್ಲ ಪುರಸಭಾ ಸದಸ್ಯರು ಪೊಲೀಸ್ ಉಪ ನಿರೀಕ್ಷಕ ಶಿವಕುಮಾರ್ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

