ಬೆಂಗಳೂರು ಗ್ರಾಮಾಂತರ

ಇಂದಿನಿಂದ ಭಾರತ ನಿರ್ಮಾಣ ಶಿಬಿರ

Published On :

ರಾಮನಗರ:  ಭಾರತ ಸರ್ಕಾರದ ವಾರ್ತಾ ಶಾಖೆ, ಕೇಂದ್ರ ಸಮಾಚಾರ ಮತ್ತು ಪ್ರಸಾರ ಸಚಿವಾಲಯದ ಅನ್ಯ ಮಾಧ್ಯಮ ಘಟಕಗಳು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಯ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಮಾಹಿತಿ ಒದಗಿಸುವ ಭಾರತ ನಿರ್ಮಾಣ ಕಾರ್ಯಕ್ರಮ ಶಿಬಿರವು ಡಿ.7 ರಿಂದ 9ರವರೆಗೆ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ. ಡಿ.7ರ ಬೆಳಗ್ಗೆ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸುವರು. ಸಂಸದ ಡಿ.ಕೆ.ಸುರೇಶ್ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸುವರು. ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುವರು.  ಶಾಸಕರಾದ ಡಿ.ಕೆ.ಶಿವಕುಮಾರ್, ಸಿ.ಪಿ.ಯೋಗೇಶ್ವರ್, ಎಚ್.ಸಿ.ಬಾಲಕೃಷ್ಣ, ಕೆ.ಶ್ರೀನಿವಾಸಮೂರ್ತಿ, ವಿಧಾನಪರಿಷತ್ ಸದಸ್ಯರಾದ ರಾಮಚಂದ್ರಗೌಡ, ಎಂ.ವಿ.ರಾಜಶೇಖರನ್, ಪುಟ್ಟಣ್ಣ, ಇ.ಕೃಷ್ಣಪ್ಪ, ಸೈಯದ್ ಮುದೀರ್ ಆಗಾ, ಜಿಪಂ ಅಧ್ಯಕ್ಷ ಎಚ್.ಸಿ.ರಾಜು, ಉಪಾಧ್ಯಕ್ಷೆ ಎಸ್.ಬಿ.ಗೌರಮ್ಮ, ರಾಮನಗರ ತಾಪಂ ಅಧ್ಯಕ್ಷೆ ಲಕ್ಷ್ಮೀ ಎ.ಮಂಜುನಾಥ್ ಭಾಗವಹಿಸುವರು.
ಡಿ.9ರ ಮಧ್ಯಾಹ್ನ 1ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು,  ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸುವರು. ವಿಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುವರು. ಸಂಸದ ಡಿ.ಕೆ.ಸುರೇಶ್ ಮತ್ತಿತರರು ಭಾಗವಹಿಸುವರು.
ಕಾರ್ಯಕ್ರಮದ ವಿವರ: ಡಿ.7ರಂದು ಸಂಜೆ 4ಕ್ಕೆ ಲಘು ನಾಟಕಗಳು, ಸರ್ವ ಶಿಕ್ಷಣ ಅಭಿಯಾನ, ಸಾಮಾಜಿಕ ಅರಣ್ಯ, ಐಸಿಡಿಎಸ್, ಮಹಿಳಾ ಸಬಲೀಕರಣ, ಕೇಂದ್ರ ಸರ್ಕಾರದ ಚಲನಚಿತ್ರ ವಿಭಾಗದಿಂದ ಚಲನಚಿತ್ರ ಪ್ರದರ್ಶನ, ಸಂಗೀತ ಮತ್ತು ನಾಟಕ ವಿಭಾಗದಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ರಸಸಂಜೆ ಕಾರ್ಯಕ್ರಮ ನಡೆಯಲಿದೆ.
ಡಿ.8ರಂದು ಬೆಳಗ್ಗೆ 11ಕ್ಕೆ ಕೃಷಿ, ತೋಟಗಾರಿಕೆ, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆ, ನಿರ್ಮಲ ಭಾರತ ಅಭಿಯಾನ, ಕ್ಷೀರಭಾಗ್ಯ, ಜಲಾನಯನ, ವಿದ್ಯುತ್, ಗ್ರಾಮೀಣ ದೂರವಾಣಿ, ಮಧ್ಯಾಹ್ನದ ಬಿಸಿಯೂಟ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗಳ ಬಗ್ಗೆ ಕಾರ್ಯಾಗಾರ ನಡೆಯಲಿವೆ. ಸಂಜೆ 4ಕ್ಕೆ ಲಘು ನಾಟಕ, ಕೇಂದ್ರ ಸರ್ಕಾರದ ಚಲನಚಿತ್ರ ವಿಭಾಗದಿಂದ ಚಲನಚಿತ್ರ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ, ರಸಸಂಜೆ ಕಾರ್ಯಕ್ರಮ ನಡೆಯಲಿವೆ.
ಡಿ.9ರಂದು ಬೆಳಗ್ಗೆ 11ಕ್ಕೆ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ, ಭೂ ಸ್ವಾಧೀನ ಕಾಯಿದೆ, ಸಕಾಲ, ಆಹಾರ ಭದ್ರತಾ ಕಾಯಿದೆ, ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ, ಆಧಾರ್, ಸಾಮಾಜಿಕ ಭದ್ರತೆ, ಸಾರ್ವಜನಿಕ ವಿತರಣಾ ವ್ಯವಸ್ಥೆ ಬಗ್ಗೆ ಕಾರ್ಯಾಗಾರ ನಡೆಯಲಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.