ಬೆಂಗಳೂರು ಗ್ರಾಮಾಂತರ

'ಕನ್ನಡ- ಕಾವೇರಿ ಸ್ವಾಭಿಮಾನದ ಸಂಕೇತ'

Published On :

ಚನ್ನಪಟ್ಟಣ: ಭಾರತೀಯ ಭಾಷಾ ಶಾಸ್ತ್ರದಲ್ಲಿ ಕನ್ನಡಕ್ಕೆ ತನ್ನದೇ ಆದ ಮಹತ್ವ ವಿದ್ದು ದ್ರಾವಿಡ ಭಾಷೆಗಳಲ್ಲಿ ಮೂರನೇ ಪ್ರಾಚೀನ ಭಾಷೆ ಕನ್ನಡವಾಗಿದೆ ಎಂದು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮುಖ್ಯ ಶಿಕ್ಷಕ ಚನ್ನವೀರೇಗೌಡ ತಿಳಿಸಿದರು.
ತಾಲೂಕು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪಟ್ಟಣದ ಚನ್ನಾಂಬಿಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಶಿವಲಿಂಗೇಗೌಡ ಸಿಂಗರಾಜಿಪುರದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ, ಕರ್ನಾಟಕ, ಕಾವೇರಿ ಈ ನಾಡಿನ ಹಿರಿಮೆ, ಸ್ವಾಭಿಮಾನದ ಸಂಕೇತವಾಗಿದೆ. ನಮ್ಮ ನಾಡಿನ ಹಿರಿಮೆಯಲ್ಲಿ ಈ ಮೂರು ಹೆಸರು ಪ್ರಧಾನ ಪಾತ್ರವಹಿಸಲಿದ್ದು ಈ ಮೂರೂ ಶಬ್ದಗಳ ಅನನ್ಯತೆಯನ್ನು ಯುವ ಸಮುದಾಯಕ್ಕೆ ಅರಿವು ಮೂಡಿಸ ಬೇಕಾದ ಅಗತ್ಯತೆ ಸಾಕಷ್ಟಿದೆ. ಈನಿಟ್ಟಿನಲ್ಲಿ ಕಸಾಪ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳುವ ಮೂಲಕ ನಾಡು ನುಡಿಯ ಬಗ್ಗೆ ವಿದ್ಯಾರ್ಥಿ, ಯುವಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  ಕನ್ನಡಪರ ಹೋರಾಟಗಾರ ಸಿಂ.ಲಿಂ.ನಾಗರಾಜು ಮಾತನಾಡಿ, ಕನ್ನಡ ಭಾಷೆ ಉಳಿಯಲು ಶಾಲೆಗಳಲ್ಲಿ ಕನ್ನಡ ಶಿಕ್ಷಣದ ಮಾಧ್ಯಮವಾಗಬೇಕು. ಕೇವಲ ಸಾಹಿತ್ಯ ಕೃತಿಗಳು ರಚನೆಯಾದರೆ ಸಾಲದು. ಎಲ್ಲಾ ಕ್ಷೇತ್ರಗಳಲ್ಲಿಯೂ ಕನ್ನಡ ಬಳಕೆಯಾಗಬೇಕು.  ಅದಕ್ಕಾಗಿ ಪಾರಿಭಾಷಿಕ ಪದಗಳು ಬೆಳೆಯಬೇಕು ಎಂದರು. ತಾಲೂಕು ಕಸಾಪ ಅಧ್ಯಕ್ಷ ಎಂ.ಶಿವಮಾದು ಮಾತನಾಡಿ, ಮಕ್ಕಳು ಪುಸ್ತಕ ಓದುವ ಸಂಸ್ಕೃತಿ ರೂಡಿಸಿಕೊಂಡರೆ ಭವಿಷ್ಯದಲ್ಲಿನ ಹಲವಾರು ಸವಾಲುಗಳನ್ನು ದಿಟ್ಟವಾಗಿ ಎದುರಿಸಬಹುದು. ಪೂರಕವಾಗಿ ಕನ್ನಡ ದಿನಪತ್ರಿಕೆ ಹಾಗೂ ಪುಸ್ತಕಗಳನ್ನು ನಿತ್ಯವೂ ಓದುವ ಹವ್ಯಾಸ ರೂಢಿಸಿಕೊಳ್ಳಿ ಪ್ರತಿಯೊಬ್ಬರೂ ಕನ್ನಡ ಶಬ್ದಕೋಶವಾಗಬೇಕು.ಆಗ ಮಾತ್ರ ಮಾತೃ ಭಾಷೆ ಬೆಳೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಕಸಾಪ ಪದಾಧಿಕಾರಿ ವಿಷಕಂಠಯ್ಯ, ಹೆಚ್.ಮಂಜುನಾಥ್, ಪೂರ್ಣಿಮಾ ನಿಂಗೇಗೌಡ, ದೊಳ್ಳೇಗೌಡ, ವಿಜಯ್ ರಾಂಪುರ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.