ಬೆಂಗಳೂರು ಗ್ರಾಮಾಂತರ

ಆಧಾರ್ ಕಾರ್ಡಿಗೆ ರು. 50 ವಸೂಲಿ

Published On :

ರಾಮನಗರ: ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ಆಧಾರ್ ಗುರುತಿನ ಚೀಟಿ ನೀಡಲು ನಿಯೋಜಿಸಲ್ಪಟ್ಟಿರುವ ಏಜೆನ್ಸಿಯವರು ಗ್ರಾಮಸ್ಥರಿಗೆ ಉಚಿತವಾಗಿ ಕಾರ್ಡ್ ವಿತರಿಸುತ್ತಿಲ್ಲ. ಏಜೆನ್ಸಿದಾರ ಹಗಲು ದರೋಡೆಗೆ ಇಳಿದಿದ್ದು, ಕಾರ್ಡ್ ಒಂದಕ್ಕೆ ರು.50 ಸುಲಿಗೆ ಮಾಡುತ್ತಿದ್ದಾರೆ ಎನ್ನುವುದು ಗ್ರಾಮಸ್ಥರ ಆರೋಪವಾಗಿದೆ.   ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಏಜೆನ್ಸಿಯವರು ನಡೆಸುತ್ತಿರುವ ಹಣ ಲೂಟಿ ದಂಧೆಗೆ ಸರ್ಕಾರಿ ಅಧಿಕಾರಿಗಳೇ ಶಾಮೀಲಾಗಿ ಕುಮ್ಮಕ್ಕು ನೀಡಿರುವ ಗುಮಾನಿ ಇದೆ. ಸರ್ಕಾರಿ ವ್ಯವಸ್ಥೆಯಲ್ಲಾದರೆ ಮಾತ್ರ ಉಚಿತ. ಖಾಸಗಿಯವರಿಗೆ ಹಣ ನೀಡಬೇಕು ಎನ್ನುವ ಮಾತನ್ನು ಸಂಬಂಧಿಸಿದ ಅಧಿಕಾರಿಗಳೇ ಹೇಳುತ್ತಿದ್ದಾರೆ. ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯ ಸಾಫಲ್ಯಕ್ಕೆ ಅಧಿಕಾರಿಗಳೇ ಅಡ್ಡಿಯಾಗಿದ್ದಾರೆ. ಗ್ರಾಮೀಣ ಜನರ ಮುಗ್ಧತೆಯನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಏಜೆಂಟರು ಅಧಿಕಾರಿಗಳ ಕುಮ್ಮಕ್ಕಿನಿಂದ ಜನರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ದಂಧೆಗೆ ಕಡಿವಾಣ ಹಾಕಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.
ಮಗುವಿನ ಮುಖ ಕಚ್ಚಿದ ನಾಯಿ
ನೆಲಮಂಗಲ: ಮಗುವಿನ ಮುಖಕ್ಕೆ ನಾಯಿಯೊಂದು ಕಚ್ಚಿ  ಗಾಯಗೊಳಿಸಿರುವ ಘಟನೆ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ಗಾಯಗೊಂಡಿರುವವನನ್ನು 2 ವರ್ಷದ ಆಯಾನ್ ಎಂದು ಗುರುತಿಸಲಾಗಿದೆ. ಈ ಮಗು ಮನೆಯ ಮುಂದೆ ಆಟವಾಡುತ್ತಿದ್ದಾಗ ದಿಢೀರನೆ ಬಂದ ನಾಯಿ ಮಗುವಿನ ಮುಖ, ತುಟಿ, ಕೆನ್ನೆ, ಕಿವಿಗೆ ಕಚ್ಚಿ ಗಾಯಗೊಳಿಸುತ್ತಿದ್ದಾಗ ಮಗು ಅಳುವಿನ ಶಬ್ದ ಕೇಳಿ ಬಂದ ತಾಯಿ ಶಿರಿನ್ ನಾಯಿಯನ್ನು ಓಡಿಸಿ ಮಗುವನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಈ ಘಟನೆ ಬಗ್ಗೆ ಬೇಸತ್ತ ಗ್ರಾಮಸ್ಥರು ವಿಶ್ವೇಶ್ವರಪುರ ಗ್ರಾಮ ಪಂಚಾಯ್ತಿಗೆ ಇಸ್ಲಾಂಪುರ ಗ್ರಾಮದಲ್ಲಿ ಅತಿ ಹೆಚ್ಚು ನಾಯಿಗಳ ಹಾವಳಿ ಇರುವ ಬಗ್ಗೆ  ಹಲವಾರು ಬಾರಿ ಲಿಖಿತ ದೂರು ನೀಡಿದ್ದರೂ ಕ್ರಮ ವಹಿಸದ ಪಂಚಾಯ್ತಿ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.