ಬೆಂಗಳೂರು ಗ್ರಾಮಾಂತರ

ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ

Published On :

ಚನ್ನಪಟ್ಟಣ: ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಪಟ್ಟಣದ ನ್ಯಾಯಾಲಯದ ರಸ್ತೆಯಲ್ಲಿ ಸಂಭವಿಸಿದೆ. ನಯಾಜ್ (28) ಹಲ್ಲೆಗೀಡಾಗಿದ್ದ ವ್ಯಕ್ತಿಯಾಗಿದ್ದು, ಈತ ಕೋರ್ಟ್ ರಸ್ತೆಯಲ್ಲಿರುವ ಜಾವಿದ್ ಗ್ಯಾರೇಜ್ನಲ್ಲಿ ಕೆಲಸ ನಿಮಿತ ಬಂದಿದಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಗಲಾಟೆಯಲ್ಲಿ ಜಾವಿದ್, ಲಾಲ್, ಪಸಿ ರಾಡಿನಿಂದ ಹಲ್ಲೆ ಮಾಡಿದ್ದಾರೆ. ತೀವ್ರ ಗಾಯಗೊಂಡಿರುವ ನಯಾಜ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ವಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳಾದ ಲಾಲ್ ಮತ್ತು ಪಸಿ ಅವರನ್ನು ಪೊಲೀಸರು ಬಂಧಿಸಿದ್ದು ಜಾವಿದ್ ತಲೆ ಮರೆಸಿ ಕೊಂಡಿದ್ದಾನೆ.
ರೈಲಿಗೆ ಸಿಲುಕಿ ವ್ಯಕ್ತಿ ಸಾವು
ಚನ್ನಪಟ್ಟಣ:  ರೇಲ್ವೆ ಹಳಿ ದಾಟುತ್ತಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವಿಗೀಡಾಗಿರುವ ಘಟನೆ ಪಟ್ಟಣದ ರೇಲ್ವೆ ನಿಲ್ದಾಣದ ಬಳಿ ಸಂಭವಿಸಿದೆ. ಇಲ್ಲಿನ ಮೇದರ ಬೀದಿ ನಿವಾಸಿ ಮಂಜುನಾಥ್(50) ಮೃತ ದುರ್ದೈವಿ. ಮಧ್ಯಾಹ್ನ ರೇಲ್ವೆ ಹಳಿ ದಾಟುವ ಸಮಯದಲ್ಲಿ ವೇಗವಾಗಿ ಬಂದ ರೈಲುಗಾಡಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಈ ಸಂಬಂಧ ಚನ್ನಪಟ್ಟಣ ರೇಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸಂಸದ ಸುರೇಶ್, ನಗರಸಭಾ ಸದಸ್ಯ ಮುದ್ದು ಕೃಷ್ಣ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.