ಕಾಟಾಚಾರದ ಆಂದೋಲನ...
ರಾಮನಗರ: ನಗರದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶನಿವಾರದಿಂದ ಆರಂಭವಾಗಿರುವ ಆಂದೋಲನ ಕಾಟಾಚಾರಕ್ಕೆ ಎಂಬಂತಾಗಿದೆ.
ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಒದಗಿಸುವಲ್ಲಿ ಅಧಿಕಾರಿಗಳು ವಿಫಲವಾಗಿರುವ ರೀತಿಯಲ್ಲೇ ಭಾರತ್ ನಿರ್ಮಾಣ್ ಕಾರ್ಯಕ್ರಮಕ್ಕೆ ಜನರನ್ನು ಕರೆತರುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.ಭಾನುವಾರ ಬೆಳಗ್ಗೆ 11ರಿಂದ ಸರ್ಕಾರದ ಯೋಜನೆಗಳಾದ ಕೃಷಿ, ತೋಟಗಾರಿಕೆ, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆ, ನಿರ್ಮಲ ಭಾರತ ಅಭಿಯಾನ, ಕ್ಷೀರಭಾಗ್ಯ, ಜಲಾನಯನ, ವಿದ್ಯುತ್, ಗ್ರಾಮೀಣ ದೂರವಾಣಿ, ಮಧ್ಯಾಹ್ನದ ಬಿಸಿಯೂಟ ಹಾಗೂ ನರೇಗಾ ಯೋಜನೆಗಳ ಬಗ್ಗೆ ಕಾರ್ಯಾಗಾರಗಳು ನಡೆದವು. ಸಾರ್ವಜನಿಕರು ಇತ್ತ ಕಡೆ ತಲೆ ಹಾಕಲೇ ಇಲ್ಲ. ಹಾಜರಿದ್ದುದು ಬೆರಳೆಣಿಕೆ ಮಂದಿ ಮಾತ್ರ.
ಬಲವಂತ ಕರೆತರಲಾಗಿತ್ತು: ಡಿ.7ರಂದು ಕಾರ್ಯಕ್ರಮವನ್ನು ಉದ್ಘಾಟಿಸಲು ಸಂಸದ ಡಿ.ಕೆ.ಸುರೇಶ್ ಆಗಮಿಸಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷದ ಕೆಲ ಕಾರ್ಯಕರ್ತರೂ ಆಗಮಿಸಿದ್ದರು. ಅಲ್ಲದೆ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳನ್ನು ಬಲವಂತವಾಗಿ ತಂದು ಕೂರಿಸಲಾಗಿತ್ತು. ಭಾನುವಾರ ನಡೆದ ಕಾರ್ಯಾಗಾರಗಳಿಗೆ ಯಾವುದೇ ಪ್ರಮುಖ ರಾಜಕಾರಣಿಗಳು ಆಗಮಿಸಿರಲಿಲ್ಲ. ಭಾನುವಾರವಾದ್ದರಿಂದ ಶಾಲಾ-ಕಾಲೇಜುಗಳಿಗೆ ರಜೆ ಇದ್ದುದರಿಂದ ವಿದ್ಯಾರ್ಥಿಗಳನ್ನೂ ಕರೆತರಲು ಆಯೋಜಕರಿಗೆ ಸಾಧ್ಯವಾಗಲಿಲ್ಲ.
ಕೃಷಿ, ತೋಟಗಾರಿಕೆ ಇಲಾಖೆಗಳ ಉಪ ನಿರ್ದೇಶಕರು ಮತ್ತು ಜಿ.ಪಂ.ನ ಮುಖ್ಯ ಯೋಜನಾಧಿಕಾರಿಯನ್ನು ಹೊರತುಪಡಿಸಿ, ಜಿಲ್ಲಾಧಿಕಾರಿ, ಜಿ.ಪಂ. ಸಿಇಒ, ಉಪ ವಿಭಾಗಾಧಿಕಾರಿ, ತಹಸೀಲ್ದಾರ್ಗಳು ಸೇರಿದಂತೆ ಇನ್ನಿತರೆ ಯಾವುದೇ ಜಿಲ್ಲಾ ಮಟ್ಟದ ಅಧಿಕಾರಿಗಳು ಇತ್ತ ಸುಳಿಯಲಿಲ್ಲ.
ಇಂಥದ್ದೊಂದು ಮಹತ್ವಪೂರ್ಣ ಕಾರ್ಯಕ್ರಮವನ್ನು ಆಯೋಜಿಸುವ ಮುನ್ನ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಭಾಗದ ಜನರಿಗೆ ಈ ಬಗ್ಗೆ ಮಾಹಿತಿ ನೀಡಬೇಕಿತ್ತು. ಸಾರ್ವಜನಿಕರನ್ನು ಕರೆತಂದು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಪ್ರಯೋಜನ ಪಡೆದುಕೊಳ್ಳುವಂತೆ ಪ್ರೇರೇಪಿಸಬೇಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

