ಬೆಂಗಳೂರು ಗ್ರಾಮಾಂತರ

ನೂತನ ಸಾಲ ವಿತರಣೆ ಕಾರ್ಯಕ್ರಮ

Published On :

ವಿಜಯಪುರ: ಹಿಂದಿನ ದಿನಗಳಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಗ್ರಾಮೀಣ ಹಾಗೂ ಪಟ್ಟಣಗಳಲ್ಲಿ ಸಾಕಾಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು ಸಾರ್ವಜನಿಕರು ಸದುಪಯೊಗಪಡಿಸಿಕೊಳ್ಳಬೇಕು ಎಂದು ಪುರಸಭಾ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಎಂ.ಸತೀಶ್ ಕುಮಾರ್ ತಿಳಿಸಿದರು.
ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ  ನೂತನ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿ ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇದ್ದು ಇತ್ತ ಗಮನಹರಿಸಿಬೇಕು ಎಂದರು.
ಸಂಸ್ಥೆಯ ಜಿಲ್ಲಾ ಘಟಕದ ನಿರ್ದೇಶಕ ಶಿವಾನಂದಾಚಾರ್ಯ ಮಾತನಾಡಿ, ಇಲ್ಲಿಯ ತನಕ ದೇವನಹಳ್ಳಿ ತಾಲೂಕಿನಾದ್ಯಂತ 700 ಮಹಿಳಾ ಸ್ವಸಾಹಯ ಗುಂಪುಗಳು ರಚನೆಯಾಗಿದ್ದು ಮುಂದಿನ ವರ್ಷದಲ್ಲಿ 3000 ಸಂಘಗಳನ್ನು ರಚಿಸುವ ಗುರಿಯನ್ನು ಇರಿಸಿಕೊಂಡಿದ್ದೇವೆ .ಐಡಿಬಿಐ ಬ್ಯಾಂಕ್ ಸಹಯೋಗದೊಂದಿಗೆ 20ಕೋಟಿ ಸಾಲ ನೀಡುವ ರೀತಿಯಲ್ಲಿ ನಿಗದಿಪಡಿಸಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರವೀಣ್ ಕುಮಾರ್ ಮಾತನಾಡಿ ಕಳೆದ 20 ವರ್ಷಗಳಿಂದ ಈ ಸಂಸ್ಥೆ ನಡೆದುಕೊಂಡುಬಂದಿದ್ದು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಹಾಗೂ ಶಿಸ್ತಿನ ಜೀವನದ ಬಗ್ಗೆ ಅರಿವು ಮೂಡಿಸುತ್ತಾ ಬಂದಿದೆ ಎಂದರು. ಯೋಜನಾಧಿಕಾರಿ ಸುರೇಶ್ ಮಾತನಾಡಿ, ರುದ್ರಭೂಮಿ, ದೇವಾಲಯಗಳು ಗ್ರಾಮೀಣಾಭಿವೃದ್ಧಿ ಯೋಜನೆಗಳು ಹಾಗೂ ಉತ್ತಮ ವಿಚಾರಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.