ಸುದ್ದಿ ಸಂಕ್ಷೇಪ
ಪರವಾನಗಿ ನಿಯಮ ಉಲ್ಲಂಘನೆ ಬಸ್ ವಶ
ದೇವನಹಳ್ಳಿ: ಚಿಕ್ಕಬಳ್ಳಾಪುರದಿಂದ ಮತ್ತು ಶಿಢ್ಲಘಟ್ಟ ಪಟ್ಟಣಗಳಿಂದ ಬೆಂಗಳೂರಿಗೆ ಸಂಚಾರ ಮಾಡುತ್ತಿದ್ದ ಎರಡು ಖಾಸಗಿ ಬಸ್ಗಳ ಪರ್ಮಿಟ್ ಪರಿಶೀಲಿಸಿದ ಇಲ್ಲಿನ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಎರಡು ವಾಹನಗಳನ್ನು ವಶಕ್ಕೆ ಪಡೆದು ಕಾನೂನಿನ ಕ್ರಮ ಕೈಗೊಂಡಿದ್ದಾರೆ. ಜಂಟಿ ಸಾರಿಗೆ ಆಯುಕ್ತರ ಮಾರ್ಗದರ್ಶನದಲ್ಲಿ ಕ್ರಮ ಕೈಗೊಂಡ ಇಲ್ಲಿನ ಸಾರಿಗೆ ಅಧಿಕಾರಿಗಳಾದ ಎನ್.ಎಸ್. ಭೀಮಪ್ಪ ಅವರು ಪತ್ರಕರ್ತರೊಂದಿಗೆ ಮಾತನಾಡಿ ಈ ಭಾಗದಲ್ಲಿ ಅನೇಕ ಖಾಸಗೀ ಬಸ್ಗಳ ಮಾಲೀಕರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಮಾತ್ರ ಒಪ್ಪಂದದ ಮೇರೆಗೆ ಜನಗಳನ್ನು ಸಾಗಿಸಲು ಪರ್ಮಿಟ್ ಪಡೆದಿದ್ದು ಅವರು ರಾಜ್ಯ ರಸ್ತೆ ಸಾರಿಗೆ ವಾಹನಗಳಿಗೆ ಪೈಪೋಟಿಯಂತೆ ಬಸ್ಗಳನ್ನು ಚಲಾಯಿಸುತ್ತಿದ್ದರು ಎಂದು ತಿಳಿಸಿದರು.
ಆಚಾರ್ಯ ತುಳಸಿಶಾಂತಿ ಸ್ಥಾವನೆ
ಹೊಸಕೋಟೆ: ರಾಷ್ಟ್ರದಲ್ಲಿ ಸಾಮಾಜಿಕ ವಲಯದಲ್ಲಿ ಶಾಂತಿ ಸ್ಥಾಪಿಸುವಲ್ಲಿ ಆಚಾರ್ಯ ತುಳುಸಿಯವರು ಬೋಧನೆಗಳು ಪ್ರಮುಖ ಪಾತ್ರವಹಿಸುತ್ತಿವೆ ಎಂದು ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಹೇಳಿದರು.
ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾ ಕೇಂದ್ರದ ಆವರಣದಲ್ಲಿ ತುಳುಸಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಋಷಿ ಪರಂಪರೆಯಲ್ಲಿಯೇ ಜ್ಯೋತಿ ಪುರುಷರಾಗಿ ಧರ್ಮದ ಉಪದೇಶದೊಂದಿಗೆ ಮಾನವನ ಚಾರಿತ್ರ್ಯ ನಿರ್ಮಾಣಕ್ಕೆ ಮಾರ್ಗದರ್ಶನ ನೀಡಿ ಶ್ರೇಷ್ಠ ಸಮಾಜ ನಿರ್ಮಾಣ ಮಾಡುವಲ್ಲಿ ಬೃಹತ್ ಕ್ರಾಂತಿ ಮಾಡಿದ ಹೆಗ್ಗಳಿಕೆಯನ್ನು ಹೊಂದಿದ್ದಾರೆ ಎಂದು ಬಣ್ಣಿಸಿದರು.
ವಿಧಾನಪರಿಷತ್ ಮಾಜಿ ಸದಸ್ಯ ಡಾ.ಏಜಾಸುದ್ದೀನ್ ಮಾತನಾಡಿ, ವಿಶ್ವದಲ್ಲಿ ಅತ್ಯಂತ ಶ್ರೇಷ್ಠ ಮಟ್ಟದ ಗುರು ಪರಂಪರೆಯನ್ನು ಜೈನ ಧರ್ಮ ಹೊಂದಿದೆ. ಬೋಧನೆಗು ಆ ಧರ್ಮಕ್ಕೆ ಮಾತ್ರ ಸೀಮಿತಗೊಳ್ಳದೆ ಇತರರಿಗೂ ಆದರ್ಶವಾಗಿವೆ ಎಂದರು.
ಸರ್ಕಾರದ ಸವಲತ್ತು ಉಪಯೋಗಪಡಿಸಿಕೊಳ್ಳಿ
ವಿಜಯಪುರ: ಅಸ್ಪೃಶ್ಯತೆ ಎನ್ನುವ ಪಿಡುಗು ಸಮಾಜದಿಂದ ತೊಲಗಬೇಕು ಎನ್ನುವ ಉದ್ದೇಶದಿಂದ ಸಂವಿಧಾನದಲ್ಲಿ ಮೀಸಲಾತಿ ರಚನೆಯಾಗಿದ್ದು ಇದನ್ನು ಮಾಡಿದ ಬಾಬಾಸಾಬ್ ಅಂಬೇಡ್ಕರ್ ಅವರಿಗೆ ಇಡೀ ಜನಾಂಗ ಕೃತಜ್ಞತೆ ಸಲ್ಲಿಸುತ್ತದೆ ಎಂದು ತಾ.ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಕೆ.ಶಿವಪ್ಪ ತಿಳಿಸಿದರು. ಅವರು ಪಟ್ಟಣದಲ್ಲಿ ಹರಿಜನ ಕುಂಟೆಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನದ ವಿಶೇಷವಾಗಿ ಪೂಜೆ ಸಲ್ಲಿಸಿ ಮಾತನಾಡುತ್ತಿದ್ದರು. ಪ್ರತಿಯೊಬ್ಬ ಹರಿಜನ ಗಿರಿಜನರು ಅರ್ಥಿಕವಾಗಿ ಸ್ವಾವಲಂಬಿಗಳಾಗಿ ಸಮಾಜದಲ್ಲಿ ಬದುಕಲೇಂದು ಸರ್ಕಾರವು ಸಾಕಾಷ್ಟು ಅನುದಾನಗಳನ್ನು ಬಿಡುಗಡೆ ಮಾಡುತ್ತಿದ್ದು ಇದನ್ನು ಎಲ್ಲರೂ ಅರಿತು ಕೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ದುರ್ಗಾತಾಯಿ ದೇವಾಲಯದ ಟ್ರಸ್ಟ್ ಅಧ್ಯಕ್ಷ ಓಬಳೇಶ್ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

