'ನಮ್ಮೊಳಗಿನ ಶಕ್ತಿ ಅರಿತಾಗ ಸಾಧನೆ ಸಾಧ್ಯ'
ನೆಲಮಂಗಲ: ನಮ್ಮ ಸಂಸ್ಕೃತಿ ನಮ್ಮ ಕಾಯಕ ಹಾಗೂ ನಮ್ಮೊಳಗಿರುವ ಶಕ್ತಿಯನ್ನು ಅರಿತು ಮುನ್ನಡೆದಾಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಹೊನ್ನಮ್ಮ ಗವಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಅವರು ಶನಿವಾರ ತಾಲೂಕಿನ ಶ್ರೀ ಶಿವಗಂಗಾ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ನೀಡಿರುವ ಸೈಕಲ್ ವಿತರಣ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದು ಶಕ್ತಿ ಇದೆ. ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬಾಳಬಹುದು. ಜೀವನದಲ್ಲಿ ಗುರಿಯನ್ನು ಇಟ್ಟು ಆ ಗುರಿಯ ಕಡೆಗೆ ಶ್ರದ್ಧೆಯಿಂದ ನಡೆದುಕೊಳ್ಳಬೇಕು. ಬೇರೆ ವಿಷಯಗಳ ಆಕರ್ಷಣೆಗಳಿಗೆ ಒಳಗಾಗದೆ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿದಾಗ ಮಾತ್ರ ಗುರಿ ಸಾಧಿಸಬಹುದು ಎಂದರು.
ಇನ್ಪೋಸಿಸ್ ಸಂಸ್ಥೆಯ ಮಹೇಶ್ ಮಾತನಾಡಿ, ಪ್ರತಿಯೊಬ್ಬರಿಗೂ ಮಾಹಿತಿ ತಂತ್ರಜ್ಞಾನದ ಅವಶ್ಯಕತೆ ಇದೆ. ನಾವು ಕೂಡ ರೈತರ ಮಕ್ಕಳಾಗಿ ವಿದ್ಯೆ ಕಲಿತು ಇಂದು ವಿಶ್ವದಲ್ಲೇ ಅತ್ಯುತ್ತಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೇವೆ. ನೀವು ಸಹ ಈ ವಯಸ್ಸಿನಲ್ಲಿ ಕಲಿತು ಇನ್ನೊಬ್ಬರಿಗೆ ಕಲಿತಂತಹ ವಿದ್ಯೆಯನ್ನು ಹೇಳಿಕೊಟ್ಟಾಗ ಮಾತ್ರ ನಿಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಕಿವಿಮಾತು ಹೇಳಿದರು. ಗ್ರಾಮಪಂಚಾಯ್ತಿ ಸದಸ್ಯ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷ ಎಸ್.ಟಿ.ಸಿದ್ದರಾಜು, ರಿತೇಶ್, ಮುಖ್ಯ ಶಿಕ್ಷಕ ಆರ್.ಸಿದ್ದರಾಜು, ಸಹಶಿಕ್ಷಕರಾದ ಸರಳ, ತಮ್ಮಯ್ಯ, ಅಲ್ಲಮೇನ್, ರುದ್ರಾರಾಧ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

