ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಮತ್ತು ತಾಲೂಕಿನ ರಾಜಘಟ್ಟ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಬಸವ ವಸತಿ ಯೋಜನೆ ಹಾಗೂ ಇಂದಿರಾ ಗಾಂಧಿ ಆವಾಸ್ ಯೋಜನೆಯಡಿ 2013-14ನೇ ಸಾಲಿನ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರಗಳ ವಿತರಣೆ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ 42 ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇ.ಭುವನೇಶ್ವರಿ ಮತ್ತು ತಾಲೂಕು ಪಂಚಾಯಿತಿ ಸದಸ್ಯೆ ಉಷಾ ನರಸಿಂಹಮೂರ್ತಿ ಆದೇಶ ಪತ್ರಗಳನ್ನು ವಿತರಿಸಿದರು. ಅವರು ಮಾತನಾಡಿ, ಗುಡಿಸಲು ಮುಕ್ತ ರಾಜ್ಯದ ಕನಸು ಹೊಂದಿರುವ ಸರ್ಕಾರ ಹಲವು ಯೋಜನೆಗಳ ಮೂಲಕ ಗ್ರಾಮೀಣ ಭಾಗದಲ್ಲಿ ಗುಡಿಸಲುಗಳಲ್ಲಿ ವಾಸ ಮಾಡುತ್ತಿರುವ ನಿವೇಶನ ರಹಿತ ಬಡ ಜನರಿಗೆ ವಸತಿ ಒದಗಿಸುವ ಮಹತ್ವಾಕಾಂಕ್ಷಿ ಕೆಲಸ ನಡೆಯುತ್ತಿದೆ. ಸರ್ಕಾರದ ಉದ್ದೇಶಗಳ ಸಾಕಾರಕ್ಕೆ ಸ್ಥಳೀಯ ಹಂತದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ವ್ಯವಸ್ಥಿತ ಕಾರ್ಯಯೋಜನೆ ಮೂಲಕ ಜನತೆಗೆ ನೆರವಾಗಬೇಕು. ಸೂಕ್ತ ಮಾನದಂಡಗಳನ್ನು ಬಳಸಿ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ಸಮುದಾಯ ಮತ್ತು ಆಡಳಿತ ವರ್ಗದ ಪಾತ್ರ ಪ್ರಮುಖವಾದದ್ದು ಎಂದರು.
ಸರ್ಕಾರಿ ಯೋಜನೆಗಳು ಸಾರ್ಥಕತೆ ಪಡೆಯಬೇಕಾದರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಅದಕ್ಕೆ ಪೂರಕವಾಗಿ ಸಮುದಾಯದ ಸಹಭಾಗಿತ್ವ ಕೂಡ ಅನಿವಾರ್ಯ ಎಂದು ವಿವರಿಸಿದರು. ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಚನ್ನಕೇಶವ, ಗ್ರಾಮ ಪಂಚಾಯಿತಿ ಸದಸ್ಯರಾದ ಆರ್.ಎ.ಆನಂದ್, ಸಂಗೀತ, ಪಿಡಿಓ ನಳರಾಜ್, ಸೇವಾದಳದ ಸಂಘಟಕ ಎಂ.ನಾರಾಯಣಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

