ಬೆಂಗಳೂರು ಗ್ರಾಮಾಂತರ

13ರಂದು ಒಕ್ಕಲಿಗರ ಭವನ ಉದ್ಘಾಟನೆ

Published On :

ದೇವನಹಳಿ: ತಾಲೂಕು ಒಕ್ಕಲಿಗರ ಸಂಘದವರು ಮಿನಿ ವಿಧಾನಸೌಧ ಎದರುಗಡೆ ನಿರ್ಮಿಸಿರುವ ಸುಮಾರು 1.75 ಕೋಟಿ ರು. ವೆಚ್ಚದ ನಾಡಪ್ರಭು ಕೆಂಪೇಗೌಡರ ಒಕ್ಕಲಿಗರ ಭವನ ಉದ್ಘಾಟನಾ ಸಮಾರಂಭ ಡಿ.13 ರಂದು ಆಯೋಜಿಸಿದ್ದು ಆದಿ ಚುಚಂನಗಿರಿ ಪೀಠಾಧಿಪತಿಗಳಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಪಟ್ಟದನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಹಾಗೂ ಕೆಂಗೇರಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿಗಳು ಸಾನಿಧ್ಯ ವಹಿಸುವರು ಎಂದು ಸಂಘದ ಅಧ್ಯಕ್ಷ ಕೆ.ಸಿ.ವೆಂಕಟೇಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಮಾಜಿ ಸಚಿವರಾದ ಆರ್.ಅಶೋಕ್, ಡಿ.ಕೆ. ಶಿವಕುಮಾರ್, ಬಿ.ಎನ್.ಬಚ್ಚೇಗೌಡ, ಶಾಸಕ ಪಿಳ್ಳಮುನಿಶಾಮಪ್ಪ, ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಹಾಗೂ ನಿವೇಶನ ದಾನಿಗಳಾದ ಬಿ.ಮುನೇಗೌಡ ಭಾಗವಹಿಸಲಿದ್ದಾರೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಮುನಿಶಾಮಿಗೌಡ ತಿಳಿಸಿದರು.
ದೇವನಹಳ್ಳಿ ತಾಲೂಕು ಒಕ್ಕಲಿಗರ ಸಂಘ 1996 ರಲ್ಲಿ ಪ್ರಾರಂಭಗೊಂಡಿದ್ದರೂ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಸಿ.ವೆಂಕಟೇಗೌಡ 2007 ರಲ್ಲಿ ಸಂಘದ ಅಧ್ಯಕ್ಷರಾದಮೇಲೆ ಕುಲಬಾಂಧವರನ್ನು ಸಂಘಟಿಸಿದರಲ್ಲದೆ ಕನ್ನಮಂಗಲದ ಬಿ.ಮುನೇಗೌಡರು ತಮ್ಮ ತಂದೆ ತಾಯಿಗಳಾದ ಭೈರೇಗೌಡ, ಮುನಿಯಮ್ಮ ನೆನಪಿನಲ್ಲಿ ಸಂಘಕ್ಕೆ ಅಗತ್ಯವಾದ ನಿವೇಶನವನ್ನು ದಾನವಾಗಿ ಕೊಡಿಸಿದರು ಎಂದು  ಒಕ್ಕಲಿಗರ ಸಂಘದ ಕಾರ್ಯದರ್ಶಿ ಎ. ಶಿವರಾಮಯ್ಯ ತಿಳಿಸಿದರು. ಮುಂದಿನ ದಿನಗಳಲ್ಲಿ ವಿದ್ಯಾಸಂಸ್ಥೆ ಹಾಗೂ ಸಮುದಾಯ ಭವನ ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಮುಖಂಡ ಬಿ.ಮುನೇಗೌಡ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.