ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಸಮಾರಂಭವನ್ನು ಸೂಲಿಬೆಲೆ ರಸ್ತೆಯ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಲಾಗಿತ್ತು.
ಉದ್ಘಾಟನೆಯನ್ನು ಕ್ಷೇತ್ರ ಸಮನ್ವಯ ಅಧಿಕಾರಿ ವಿ.ಎನ್. ರವಿಪ್ರಕಾಶ್ ನೆರವೇರಿಸಿ ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ಇರುತ್ತದೆ. ಆದ್ದರಿಂದ ಪ್ರತಿ ಮಕ್ಕಳಲ್ಲಿ ತಮ್ಮದೇ ಆದ ಪ್ರತಿಭೆ ಇರುತ್ತದೆ. ಅವರಲ್ಲಿನ ಸಾಂಸ್ಕೃತಿಕ ಕಲೆಯನ್ನು ಬೆಳೆಸಿದರೆ ಮುಂದಿನ ಪೀಳಿಗೆಗೆ ಕಲೆಯನ್ನು ವಿದ್ಯಾರ್ಥಿಗಳ ಮೂಲಕ ಜೀವಂತವಾಗಿ ಉಳಿಸಿದಂತಾಗುತ್ತದೆ. ಅಲ್ಲದೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಮಕ್ಕಳಿಗೆ ಸಕಾಲ ಎಂಬ ನಾಟಕ ಪ್ರಯೋಗ ಮಾಡಬೇಕಾಗುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ಬೆಟ್ಟಕೋಟೆ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ.ಎ.ಚಂದ್ರಶೇಖರ್ ವಹಿಸಿ ನಮ್ಮ ತಾಲೂಕಿನ ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆಯನ್ನು ಪರಿಣಾಮಕಾರಿಯಾಗಿ ಪ್ರದರ್ಶಿಸಿ ರಾಜ್ಯ ಮಟ್ಟದಲ್ಲಿ ಭಾಗವಹಿಸುವಂತಾಗಬೇಕು ಎಂದರು.
ಸಮಾರಂಭದಲ್ಲಿ ನಳಂದ ಬಿಎಡ್ ಕಾಲೇಜಿನ ಪ್ರಾಂಶುಪಾಲ ಟಿ.ಸಿ.ವೆಂಕಟೇಶಗೌಡ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸುಧಾತಾಯಿ, ಜೂನಿಯರ್ ಕಾಲೇಜು ಉಪ ಪ್ರಾಂಶುಪಾಲ ಪರುಶುರಾಮ್, ಗ್ರಾಮಾಂತರ ಪ್ರೌಢಶಾಲೆಯ ಪ್ರಾಂಶುಪಾಲ ಬಿ.ಎನ್. ಕೃಷ್ಣಪ್ಪ ಉಪಸ್ಥಿತರಿದ್ದರು. ದೇವನಹಳ್ಳಿ ಕಸಬ ಮತ್ತು ಕುಂದಾಣ ಹೋಬಳಿಯ 35 ಶಾಲೆಗಳ ಸುಮಾರು 800 ಮಕ್ಕಳು ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎ.ಎಸ್. ಮಂಜುನಾಥ್ ಸ್ವಾಗತ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

