ಬೆಂಗಳೂರು ಗ್ರಾಮಾಂತರ

ನಿರುದ್ಯೋಗಿಗಳಿಗೆ ತರಬೇತಿ ನೀಡುವುದೇ ಉದ್ದೇಶ

Published On :

ನೆಲಮಂಗಲ: ನಿರುದ್ಯೋಗಿಗಳಿಗೆ ತರಬೇತಿ ನೀಡಿ ಸ್ವ ಉದ್ಯೋಗ ನಡೆಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದೇ ನಮ್ಮ ಉದ್ದೇಶ ಎಂದು ಆರ್.ಸೆಟಿಗಳ ಮಾನಿಟರಿಂಗ್ ಸೆಲ್‌ನ ಮುಖ್ಯ ಸಂಯೋಜನಾಧಿಕಾರಿ ಕೆ.ಎನ್.ಜನಾರ್ದನ್ ತಿಳಿಸಿದರು.
ಅವರು ಮಂಗಳವಾರ ತಾಲೂಕಿನ ಅರಿಶಿನಕುಂಟೆಯ ರುಡ್ ಸೆಟ್ ಸಂಸ್ಥೆ 2012-13ನೇ ಸಾಲಿನ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಪುರಸ್ಕಾರ ಸಂದ ಪ್ರಯುಕ್ತ  ಆಯೋಜಿಸಿದ ಅಭಿನಂದನಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡುತ್ತಾ ಈ ಸಂಸ್ಥೆಯು ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯದ ವತಿಯಿಂದ ಭಾರತದ ನಂಬರ್ 1 ರುಡ್‌ಸೆಟ್ ಪ್ರಶಸ್ತಿಗೆ ಪಾತ್ರರಾಗಿರುವುದು ತುಂಬಾ ಅಭಿನಂದನೀಯ. ಈ ಪ್ರಶಸ್ತಿಗೆ ಕಾರಣೀಭೂತರಾದ ಸಂಸ್ಥೆಯ ನಿದೇರ್ಶಕ ಶಿವಣ್ಣ ಹಾಗೂ ಸಿಬ್ಬಂದಿಯ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು. ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆದ ನಿರುದ್ಯೋಗಸ್ಥರಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಆರ್ಥಿಕ ನೆರವು ನೀಡಿ ಅವರ ಜೀವನಕ್ಕೆ ಅಡಿಪಾಯವಾಗಿ ಕಾರ್ಯನಿರ್ವಹಿಸುವ ಮೂಲಕ ಸಾವಿರಾರು ಜನ ಉತ್ತಮ ಜೀವನೋಪಾಯ ಕಂಡುಕೊಳ್ಳುವ ಮೂಲಕ ಸಾಮಾಜಿಕ ಕಾರ್ಯ ನಿರ್ವಹಿಸುತ್ತಿದೆ ಎಂದು ಕೆನರಾಬ್ಯಾಂಕ್‌ನ ಸಂಪತ್ ಕುಮಾರ್ ಹೇಳಿದರು. ಸಿಂಡಿಕೇಟ್ ಬ್ಯಾಂಕ್ ವ್ಯವಸ್ಥಾಪಕ ರಮೇಶ್, ರಮೇಶ್.ಪಿ, ಕೆನರಾಬ್ಯಾಂಕ್ ಹಿರಿಯ ವ್ಯವಸ್ಥಾಪಕ ನಾಗರಾಜು, ನಿವೃತ್ತ ವ್ಯವಸ್ಥಾಪಕ ಶಿವಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.