ಯೋಜನೆ ಸದುಪಯೋಗಪಡಿಸಿಕೊಳ್ಳಿ
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಸಕ ಟಿ.ವೆಂಕಟರಮಣಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಸೈಕಲ್ಗಳನ್ನು ವಿತರಿಸಿದರು.
ಅವರು ಮಾತನಾಡಿ ಹಿಂದಿನ ಸರ್ಕಾರದ ಮಹತ್ವದ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಕೂಡ ಮುಂದುವರೆಸಿಕೊಂಡು ಹೋಗುತ್ತಿದೆ. ಅದೇ ರೀತಿ ಹೊಸ ಸರ್ಕಾರ ಅನೇಕ ಯೋಜನೆಗಳನ್ನು ಜನಹಿತಕ್ಕಾಗಿ ಜಾರಿಗೊಳಿಸುತ್ತಿದೆ. ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ಯೋಜನೆಗಳು ಇಂದು ಗ್ರಾಮೀಣ ಜನರಿಗೆ ವರದಾನವಾಗಿವೆ. ಶೈಕ್ಷಣಿಕ ಗುಣಮಟ್ಟ ಮತ್ತು ಸರ್ಕಾರಿ ಶಾಲೆಗಳ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಕೂಡ ಕಾಂಗ್ರೆಸ್ ಸರ್ಕಾರ ಗಣನೀಯವಾಗಿ ಚಿಂತಿಸುತ್ತಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ತಿಮ್ಮೇಗೌಡ ಮಾತನಾಡಿ ಸರ್ಕಾರಿ ಶಾಲೆಗಳ ಮಕ್ಕಳು ಇತರ ಖಾಸಗಿ ಶಾಲೆಗಳ ಮಕ್ಕಳಿಗೆ ಸರಿಸಮಾನವಾದ ವಿದ್ಯಾಭ್ಯಾಸ ಹೊಂದುವ ನಿಟ್ಟಿನಲ್ಲಿ ಸರ್ಕಾರ ಆನೇಕ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಸದುಪಯೋಗ ಆಗಬೇಕಿದೆ. ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಒತ್ತಾಸೆ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸದಸ್ಯೆ ಶ್ಯಾಮಲ, ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣಸ್ವಾಮಿ, ಉಪಾಧ್ಯಕ್ಷೆ ಚೈತ್ರ, ಗ್ರಾ.ಪಂ ಸದಸ್ಯ ಮಂಜುನಾಥ್, ಕಾಂಗ್ರೆಸ್ ಮುಖಂಡ ಜಿ.ಲಕ್ಷ್ಮೀಪತಿ, ಬೈರೇಗೌಡ, ತೂಬಗೆರೆ ವಲಯ ಶಿಕ್ಷಣ ಸಂಯೋಜಕ ನೀಲಕಂಠ ಗಾವಂಕರ್ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

