ಬೀರಸಂದ್ರ ಗೇಟ್ ಬಳಿ ಲಾರಿ ಪಲ್ಟಿ: 2 ಹಸು ಸಾವು
ದೇವನಹಳ್ಳಿ: ದೇವನಹಳ್ಳಿ ದೊಡ್ಡಬಳ್ಳಾಪುರ ರಸ್ತೆಯ ಬೀರಸಂದ್ರ ಗೇಟ್ ಬಳಿ ಬುಧವಾರ ಸಂಜೆ 4.30 ರಲ್ಲಿ ಲಾರಿಯೊಂದು ಪಲ್ಟಿಯಾಗಿ ರಸ್ತೆಯ ಪಕ್ಕದಲ್ಲೇ ಮೇಯುತ್ತಿದ್ದ ಎರಡು ಹಸುಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ ಅಲ್ಲದೆ ಮತ್ತೊಂದು ಹಸು ತೀವ್ರ ಗಾಯವಾಗಿದೆ.
ದೇವನಹಳ್ಳಿಯಿಂದ ದೊಡ್ಡಬಳ್ಳಾಪುರ ಕಡೆಗೆ ಹೋಗುತ್ತಿದ್ದ ನೀಲಗಿರಿ ಮರಗಳನ್ನು ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಹೇಳಲಾಗಿದ್ದು ಸುಮಾರು ಒಂದು ಲಕ್ಷ ರು. ಬೆಲೆ ಬಾಳುವ ಎರಡು ಹಸುಗಳು ಬೀರಸಂದ್ರ ಗ್ರಾಮದ ರೈತ ಆಂಜಿನಪ್ಪ ಅವರಿಗೆ ಸೇರಿದ್ದಾಗಿದೆ. ಸ್ಥಳಕ್ಕೆ ಬೆಂಗಳೂರು ಹಾಲು ಒಕ್ಕೂಟ ಉಪ ವ್ಯವಸ್ಥಾಪಕರಾದ ಡಾ.ಗಂಗಯ್ಯ ಆಗಮಿಸಿ ಪರಿಶೀಲಿಸಿದರು. ವಿಶ್ವನಾಥಪುರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕಾರ್ಖಾನೆಯ ಮಹಿಳಾ ಉದ್ಯೋಗಿ ಆತ್ಮಹತ್ಯೆ
ದೊಡ್ಡಬಳ್ಳಾಪುರ: ಇಲ್ಲಿನ ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕರೊಬ್ಬರು ವಿಷದ ಗುಳಿಗೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಮಲೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಸುಮಿತ್ರಮ್ಮ (35) ಎಂದು ಗುರುತಿಸಲಾಗಿದೆ. ಇಲ್ಲಿನ ಕೋಳೂರು ಸಮೀಪ ಇರುವ ಗ್ರೀನ್ ಆರ್ಗಾನಿಕ್ಸ್ ಕಾರ್ಖಾನೆಯಲ್ಲಿ ಈಕೆ ಕೆಲಸ ಮಾಡುತ್ತಿದ್ದರು. ಶನಿವಾರ ಸಂಬಳ ಪಡೆದಿದ್ದರು. ಸಂಬಳದ ವಿಚಾರದಲ್ಲಿ ಮತ್ತೊಬ್ಬಾಕೆಯ ಸಂಬಳವನ್ನೂ ಈಕೆಗೆ ನೀಡಲಾಗಿತ್ತು ಎನ್ನಲಾಗಿದೆ. ಈ ವಿಚಾರದಲ್ಲಿ ಮೇಲಧಿಕಾರಿಗಳೊಂದಿಗೆ ಉಂಟಾದ ಗೊಂದಲ ಈಕೆಯ ಸಾವಿಗೆ ಕಾರ್ರಣ ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

