ಕನ್ನಡೇತರರಿಗೂ ಕನ್ನಡ ಕಲಿಸಿ: ಸಚಿವ ರಾಮಲಿಂಗಾರೆಡ್ಡಿ
ಕ.ಪ್ರ.ವಾರ್ತೆ ್ಣ ಆನೇಕಲ್ ್ಣ ಡಿ. 11
ಸಹಸ್ರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರಕಿದ್ದು, ಕನ್ನಡ ಭಾಷಾಭಿವೃದ್ಧಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಸಾರಿಗೆ ಸಚಿವ ಆರ್. ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಅವರು ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ ದೇವ ಅವರು ಸ್ವಾತಂತ್ರ ಉದ್ಯಾನದಲ್ಲಿ ಆಯೋಜಿಸಿದ್ದ ವಿಶ್ವ ಕನ್ನಡಿಗರ ಸಮ್ಮೇಳನ ಉದ್ಘಾಟಿಸಿ ಮಾತನಾಡಿ ಬೆಂಗಳೂರು ನಗರ ಮೆಟ್ರೋಪಾಲಿಟನ್ ಸಿಟಿಯಾಗಿದ್ದು ಅನ್ಯ ರಾಜ್ಯಗಳು ಹಾಗೂ ದೇಶ ವಿದೇಶಗಳ ಜನತೆ ವಾಸಿಸುತ್ತಿದ್ದಾರೆ. ಮಾತೃಭಾಷೆ ಯಾವುದೇ ಇರಲಿ ಕನ್ನಡ ನಾಡಿನಲ್ಲಿರುವವರು ಕನ್ನಡ ಕಲಿತು ಮಾತನಾಡಬೇಕೆಂದು ಮನವಿ ಮಾಡಿದರು. ಕನ್ನಡಿಗರು ಅನ್ಯ ಭಾಷಿಕರ ಜೊತೆ ವ್ಯವಹರಿಸುವಾಗ ಕನ್ನಡದಲ್ಲೇ ಮಾತನಾಡಿ ಕನ್ನಡೇತರರಿಗೆ ಕನ್ನಡ ಕಲಿಸಬೇಕೆಂದರು.
ಮುಖ್ಯಮಂತ್ರಿ ಚಂದ್ರು ಮಾತನಾಡಿ, ಪ್ರಾಧಿಕಾರ ರಚನೆಯಲ್ಲಿ ಕನ್ನಡ ಸಂಘಟನೆಗಳ ಪಾತ್ರ ಸ್ಮರಣೀಯವಾಗಿದ್ದು ಕನ್ನಡ ಜಾಗೃತಿ ವೇದಿಕೆ ಮುಂಚೂಣಿಯಲ್ಲಿದೆ. ಕನ್ನಡ ಭಾಷೆ ಹಾಗೂ ಸಂಸ್ಕೃತಿಗೆ ಧಕ್ಕೆ ಬರುವಂತಹ ಯಾವುದೇ ಕ್ರಮ ಸಹಿಸುವುದಿಲ್ಲ ಎಂದರು.
ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ ದೇವ ಮಾತನಾಡಿ ಉನ್ನತ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲೇ ನಡೆದಲ್ಲಿ ಕನ್ನಡಿಗರು ಉನ್ನತ ಉದ್ಯೋಗ ಅಲಂಕರಿಸಲು ಸಾಧ್ಯ. ಇದರಿಂದಾಗಿ ಭಾಷೆಯ ಬೆಳವಣಿಗೆಗೆ ಸಾಧ್ಯವಾಗುತ್ತದೆ ಎಂದರು.
ಉದ್ಯೋಗ ಅಭಿವೃದ್ಧಿ ನೆಪದಲ್ಲಿ ವಲಸೆ ಹೋದ ಕನ್ನಡಿಗರೇ ತಾವು ಕನ್ನಡ ಮಾತನಾಡಿ, ತಮ್ಮ ಮಕ್ಕಳಿಗೆ ಕನ್ನಡ ಭಾಷೆ ಕಲಿಸಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಮಾವಳ್ಳಿ ಶಂಕರ್ ತಿಳಿಸಿದರು.
ಸರ್ವಜನ ಸಮಾಜ ವೇದಿಕೆ ರಾಜ್ಯಾಧ್ಯಕ್ಷ ಬಿ. ಗೋಪಾಲ್, ಪ್ರಜಾ ವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಪಟಾಪಟ್ ನಾಗರಾಜ್, ಸಾಹಿತಿ, ಕಜಾವೇ ಗೌ. ಅಧ್ಯಕ್ಷ ತಾನಂ ಕುಮಾರಸ್ವಾಮಿ ಮಾತನಾಡಿದರು.
ಹೊರ ನಾಡ ಕನ್ನಡಿಗರು, ಅನಿವಾಸಿ ಕನ್ನಡಿಗರು, ರಂಗಭೂಮಿ, ಚಿತ್ರರಂಗ, ಪತ್ರಿಕಾರಂಗ, ಸಾಹಿತ್ಯ, ಗಡೀ ಭಾಗದ ಕನ್ನಡ ಸಂಘಟನೆಗಳ ಮುಖಂಡರು, ವೈದ್ಯರು, ವಕೀಲರು, ಶಿಕ್ಷಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ನೂರಾರು ಗಣ್ಯರನ್ನು ಗೌರವಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

