ಬೆಂಗಳೂರು ಗ್ರಾಮಾಂತರ

ಯದುವಂಶದ ಕೊನೆ ಕುಡಿಗೆ ಕಸಾಪ ನಮನ

Published On :

ನೆಲಮಂಗಲ: ಯದುವಂಶದ ಕೊನೆಯ ಕುಡಿ, ಮೈಸೂರು ರಾಜವಂಶಸ್ಥ ಶ್ರೀ ಕಂಠದತ್ತ ಒಡೆಯರ್  ನಿಧನಕ್ಕೆ  ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು  ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಅವರಿಗೆ ಅಂತಿಮ ನಮನ ಸಲ್ಲಿಸಿತು.
ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಾ.ಲಕ್ಷ್ಮೀನಾರಾಯಣಶೆಟ್ಟಿ ಮಾತನಾಡುತ್ತಾ ಸರಳ ಸಜ್ಜನಿಕೆಯ ಕ್ರಿಯಾಶೀಲರಾಗಿ ಶ್ರೀಕಂಠದತ್ತ ಒಡೆಯರ್ ಸಾಮಾಜಿಕ, ರಾಜಕೀಯ ಹಾಗೂ ಕ್ರೀಡಾ ಕ್ಷೇತ್ರ ಸೇರಿದಂತೆ ಬಹುಮುಖ ಪ್ರತಿಭೆಯುಳ್ಳವರಾಗಿ ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಮಹಾನ್ ಚೇತನವನ್ನು ಕಳೆದುಕೊಂಡಿರುವುದು ನಮಗೆಲ್ಲರಿಗೂ ತುಂಬಲಾರದ ನಷ್ಟವಾಗಿದೆ ಎಂದರು.
ರಾಜರ ಆಳ್ವಿಕೆಯಲ್ಲಿದ್ದ ಮೈಸೂರು ಸಂಸ್ಥಾನದಲ್ಲಿ ರಾಜ ಜಯಚಾಮರಾಜೇಂದ್ರ ಆಡಳಿತ ಅವಧಿಯಲ್ಲಿ
ಆಸ್ಪತ್ರೆಗಳು, ಶಾಲಾ ಕಾಲೇಜುಗಳು, ವಸತಿ ಗೃಹಗಳು, ಹಣಕಾಸು ಸಂಸ್ಥೆಗಳಿಗೆ ಅಭಿವೃದ್ಧಿ ಕಟ್ಟಡ ನಿರ್ಮಿಸುವುದರೊಂದಿಗೆ ರಾಜ್ಯದ ರೈತರ ಹಾಗೂ ವರ್ತಕರಿಗೆ ಸಾಕಷ್ಟು ಸಹಕಾರ ನೀಡುತ್ತಿದ್ದರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಎನ್.ಜಿ. ಗೋಪಾಲ್ ಹೇಳಿದರು.
 ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎನ್.ರಾಜಶೇಖರ್, ಕಾರ್ಯದರ್ಶಿ ಸೂರ್ಯಪ್ರಕಾಶ್, ಸ್ನೇಕ್ ಲೋಕೇಶ್, ಪದಾಧಿಕಾರಿಗಳಾದ ಪುಟ್ಟರಾಜು, ದ್ರಾಕ್ಷಾಯಿಣಿ,ಚಂದ್ರಮೋಹನ್, ಕೇಶವಮೂರ್ತಿ ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.