ಬೆಂಗಳೂರು ಗ್ರಾಮಾಂತರ

'ಹೈಟೆಕ್ ಅಂಗನವಾಡಿ ಕೇಂದ್ರಕ್ಕೆ ಅಗತ್ಯ ಕ್ರಮ'

Published On :

ಮಾಗಡಿ: ಗ್ರಾಮೀಣ ಬಡ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಹೈಟೆಕ್ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಂಡಿರುವುದಾಗಿ ನೆಲಮಂಗಲ ಶಾಸಕ ಡಾ. ಶ್ರೀನಿವಾಸಮೂರ್ತಿ ನುಡಿದರು.
ಅವರು ತಾಲೂಕಿನ ಸೋಲೂರು ಹೋಬಳಿ ಕೆಂಪಚಿಕ್ಕನಹಳ್ಳಿ ಗ್ರಾಮದ ಬಳಿ ಸುಮಾರು 12 ಲಕ್ಷ ರು. ವೆಚ್ಚದ ಹೈಟೆಕ್  ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡುತ್ತಾ ಹಳ್ಳಿ ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬರುವ ಮೂಲಕ ಸಮಾಜಮುಖಿಯಾಗಬೇಕು ಎಂದು ಕರೆ ನೀಡಿದರು.
ತಾ.ಪಂ. ಸದಸ್ಯೆ ಅನುಸೂಯಮ್ಮ ಕಾಂತರಾಜು ಮಾತನಾಡಿ ಗ್ರಾಮ ಸ್ವರಾಜ್ ಯೋಜನೆಯಡಿ ಕೆಂಪಚಿಕ್ಕನಹಳ್ಳಿ ಗ್ರಾಮದ ಸುತ್ತಮುತ್ತಲ ಮಕ್ಕಳಿಗೆ ಅನುಕೂಲವಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಅಂಗನವಾಡಿಗೆ ಸೇರಿಸಿ, ಸರ್ಕಾರದ ವತಿಯಿಂದ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಮಕ್ಕಳ ಆರೋಗ್ಯ, ಹಾರೈಕೆಗೆ ಕಾರ್ಯಕರ್ತೆಯರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ತಾ.ಪಂ. ಸದಸ್ಯ ಶಂಕರಪ್ಪ, ಗ್ರಾ.ಪಂ. ಸದಸ್ಯೆ ಶೋಭಾ ನರಸಿಂಹಮೂರ್ತಿ, ಸೋಲೂರು ಹೋಬಳಿ ಕರವೇ ಅಧ್ಯಕ್ಷ ಚನ್ನರಂಗಯ್ಯ, ಹನುಮಂತರಾಜು, ಸದಾಶಿವಯ್ಯ, ಉಮೇಶ್, ಕುಮಾರಸ್ವಾಮಿ, ಕಾಂತರಾಜು, ಲಕ್ಕೇನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ  ಗಂಗರಾಜು, ನವಯುಗ ರಮೇಶ್, ಕೃಷ್ಣ, ಜಿಲ್ಲಾ ಪಂಚಾಯ್ತಿ ಎಇಇ ರವಿ ಎಸ್. ಸೂರನ್, ಎಇ ಎಂಜೇರಪ್ಪ, ಪಂಚಾಯ್ತಿ ಕಾರ್ಯದರ್ಶಿ ವೆಂಕಟೇಶ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.