ಬೆಂಗಳೂರು ಗ್ರಾಮಾಂತರ

ಇಂದು ಏಸು ಜನ್ಮೋತ್ಸವ

Published On :

ಚನ್ನಪಟ್ಟಣ: ಶಾಂತಿಯ ಸಂದೇಶ ಸಾರಿದ ಏಸುಕ್ರಿಸ್ತನ ಜನ್ಮದಿನದಂದು ಅವರ ಸಂದೇಶವನ್ನು ಜನತೆಗೆ ಬಿತ್ತರಿಸುವ ಮತ್ತು ಎಲ್ಲಾ ಧರ್ಮ, ವರ್ಗದವರ ಜತೆ ಭಾತೃತ್ವ ಬೆಳೆಸುವ ಉದ್ದೇಶದಿಂದ ಡಿ.13ರಂದು ಪಟ್ಟಣದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ಏಸುವಿನ ಜನ್ಮೋತ್ಸವ ಹಮ್ಮಿ ಕೊಂಡಿರುವುದಾಗಿ ಕರ್ನಾಟಕ ಕ್ರೈಸ್ಥ ರಕ್ಷಣಾವೇದಿಕೆ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಬುಧವಾರವೇ ಕಾರ್ಯಕ್ರಮ ನಡೆಯ ಬೇಕಿತ್ತಾದರೂ ಮೈಸೂರು ಸಂಸ್ಥಾನದ ಮಹಾರಾಜರ ಮರಣದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಜನತೆಯಲ್ಲಿ ದೇವದೂತ ಏಸುಕ್ರಿಸ್ತನ ಸಂದೇಶವನ್ನು ಸಾರುವ ಉದ್ದೇಶದಿಂದ ಇದೇ ಮೊದಲಬಾರಿಗೆ ತಾಲೂಕಿನಲ್ಲಿ ಬಹಿರಂಗವಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಂಜೆ ನಾಲ್ಕರಿಂದ ರಾತ್ರಿ 8ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದ್ದು ಸಂಗೀತ ಕಾರ್ಯಕ್ರಮ ಮತ್ತು ದೇವರ ಸಂದೇಶವನ್ನು ಸಾರುವ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು. ಕಾರ್ಯಕ್ರಮವನ್ನು  ಶಾಸಕ ಸಿ.ಪಿ.ಯೋಗೇಶ್ವರ್ ಉದ್ಘಾಟಿಸಲಿದ್ದು, ಲೋಕಸಭಾ ಸದಸ್ಯ ಡಿ.ಕೆ.ಸುರೇಶ್, ಶಾಸಕ ಡಿ.ಕೆ.ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗೃಹಸಚಿವ ಕೆ.ಜೆ.ಜಾರ್ಜ್, ಸತ್ಯವೇದಾ ಭಾಷಾಂತರಗಾರ ಈ.ಡಿ. ಚೆಲ್ಲಾ ದೊರೈ, ಸಮಾಜಸೇವಕ ಸೂರ್ಯಕಾಂತ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.  ಜಿಲ್ಲೆಯ ವಿವಿಧೆಡೆಗಳಿಂದ 2ಸಾವಿರಕ್ಕೂ ಹೆಚ್ಚು ಕ್ರೈಸ್ತ ಸಮುದಾಯದವರು ಪಾಲ್ಗೊಳ್ಳಲಿದ್ದು, ಎಲ್ಲಾ ಸಮುದಾಯದವರು ಪಾಲ್ಗೊಳ್ಳಲಿದ್ದು ಕ್ರಿಸ್ಮಸ್ ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಪುಟ್ಟೇಗೌಡರೇ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ
ಚನ್ನಪಟ್ಟಣ:
ತಾಲೂಕು ಪ್ರಾಥಮಿಕ ಶಾಲಾಶಿಕ್ಷಕರ ಸಂಘಕ್ಕೆ ಮಹದೇವ್ ಅಧ್ಯಕ್ಷರಾಗಿ ಆಯ್ಕೆಗೊಂಡಿರುವುದು ಸಂಘದ ಬಯಲಾಗೆ ವಿರುದ್ಧವಾಗಿದ್ದು , ಎಸ್.ಪಿ. ಪುಟ್ಟೇಗೌಡ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರೇ ವಿನಾ ಮಹದೇವ್ ಅಲ್ಲ ಎಂದು ಶಿಕ್ಷಕರ ಸಂಘದ ಕಾರ್ಯದರ್ಶಿ ರಾಮಕೃಷ್ಣ ತಿಳಿಸಿದ್ದಾರೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಅವರು ಸಂಘದ ನಿಯಮಾವಳಿ ಪ್ರಕಾರ ಹೊಸ ಅಧ್ಯಕ್ಷರು ಆಯ್ಕೆಯಾಗ ಬೇಕಾದರೆ ಹಾಲಿ ಅಧ್ಯಕ್ಷರು ರಾಜಿನಾಮೆ ನೀಡಬೇಕು. ಇಲ್ಲ ಮರಣ ಹೊಂದಬೇಕು, ಬಳಿಕ ಜಿಲ್ಲಾ ಸಂಘ ಚುನಾವಣೆ ಮೂಲಕ ಅಧ್ಯಕ್ಷರನ್ನು ಆಯ್ಕೆ ಮಾಡಬೇಕೆ ವಿನಾ ಇದ್ದಕ್ಕಿದ್ದಂತೆ ಅಧ್ಯಕ್ಷರನ್ನು ಆಯ್ಕೆ ಮಾಡುವ ಅಧಿಕಾರಿ ತಾಲೂಕು ಕಾರ್ಯಕಾರಿಣಿಗೆ ಇಲ್ಲ ಎಂದಿದ್ದಾರೆ. ಸಂಘ ವಿರೋಧಿ ಚಟುವಟಿಕೆ ನಡೆಸಿದ್ದೇ ಆದಲ್ಲಿ ಜಿಲ್ಲಾ ಸಂಘ ಅಡಾಕ್ ಸಮಿತಿಯನ್ನು ರಚನೆ ಮಾಡುವ ಅಧಿಕಾರ ಹೊಂದಿದೆಯೇ ವಿನಾ ತಾಲೂಕು ಕಾರ್ಯಕಾರಿಣಿಯ ಕೆಲವೇ ಕೆಲವು ಮಂದಿ ತಾಲೂಕು ಅಧ್ಯಕ್ಷರನ್ನು ಆಯ್ಕೆ ಮಾಡುವ ಅಧಿಕಾರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.