ಏಡ್ಸ್ ಜಾಗೃತಿ ಕುರಿತು ಯಕ್ಷಗಾನ
ನೆಲಮಂಗಲ: ಶಿಸ್ತು ಬದ್ಧ ಜೀವನ ಕ್ರಮ ಅನುಸರಿಸುತ್ತಿರುವವರ ಸಂಖ್ಯೆ ಕ್ಷೀಣಿಸುತ್ತಿರುವುದು ನಮ್ಮ ದೇಶದ ದೌರ್ಭಾಗ್ಯ ಎಂದು ರೋಟರಿ ಅಧ್ಯಕ್ಷ ಮಂಜುನಾಥ್ ವಿಷಾದ ವ್ಯಕ್ತಪಡಿಸಿದರು.
ಅವರು ಬುಧವಾರ ಸೊಂಡೆಕೊಪ್ಪ ಸರ್ಕಲ್ನಲ್ಲಿ ನಡೆದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಜಿಲ್ಲಾ ಏಡ್ಸ್ ನಿಯಂತ್ರಣ ಮಂಡಳಿ ಸಂಯುಕ್ತಾಶ್ರಯದಲ್ಲಿ ಹಾಗೂ ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ಏಡ್ಸ್ ಜಾಗೃತಿ ಕುರಿತು ಯಕ್ಷಗಾನ ಜೀವನ ಜೋಪಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಎಚ್.ಐ.ವಿ.ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಜನ ಸಾಮಾನ್ಯರಿಗೆ ಅರಿವು ಮೂಡಿಸುವ ಕಾರ್ಯವನ್ನು ಯುವ ಜನತೆ ಮಾಡಬೇಕು. ಸೋಂಕಿನಿಂದ ಬಳಲುತ್ತಿರುವವರನ್ನು ರಕ್ಷಿಸುವುದರೊಂದಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಮುಕ್ತವಾಗಿ ಬೆರೆಯುವುದಕ್ಕೆ ಸಹಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಜೀವನದಲ್ಲಿ ಶಿಸ್ತು ಸಂಯಮ, ತಾಳ್ಮೆಯನ್ನು ಕಳೆದುಕೊಂಡರೆ ಎಡವಟ್ಟು ಆಗುವುದರೊಂದಿಗೆ ಏಡ್ಸ್ನಂತಹ ಕಾಯಿಲೆಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಮನುಷ್ಯ ಶಿಷ್ಟಾಚಾರದಿಂದ ಬಾಳಬೇಕು. ಲಿಂಗ ಭೇದ ಹಾಗೂ ವಯಸ್ಸಿನ ತಾರತಮ್ಯವಿಲ್ಲದೇ ಪ್ರತಿಯೊಬ್ಬರು ಏಡ್ಸ್ ಜಾಗೃತಿಯ ಅರಿವು ಮೂಡಿಸಬೇಕು. ಸರ್ವರೂ ಸುಶಿಕ್ಷಿತರಾದರೆ ಉತ್ತಮ ಜೀವನ ಶೈಲಿ ಹೊಂದಬಹುದು ಎಂದು ರೋಟರಿ ಮಾಜಿ ಅಧ್ಯಕ್ಷ ನಾಗರಾಜ್ ಹೇಳಿದರು. ಯಕ್ಷಗಾನ ಕಲಾವಿದರು ಅಭಿನಯದ ಮೂಲಕ ಏಡ್ಸ್ ಜಾಗೃತಿ ಮೂಡಿಸುವಂತಹ ವಿಚಾರಗಳ ಬಗ್ಗೆ ಅರಿವು ಮೂಡಿಸಿದರು. ನೂರಾರು ಜನ ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಿದರು.
ಕಾರ್ಯದರ್ಶಿ ಎನ್.ಎಸ್.ಮೂರ್ತಿ, ಖಜಾಂಚಿ ಸತೀಶ್, ಸದಸ್ಯರಾದ ನಾಗರಾಜು, ರಾಜಶೇಖರ್ ಸೇರಿದಂತೆ ಸಾರ್ವಜನಿಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

