ಇಂದು ಗುರುಸಂಸ್ಮರಣ ಕಾರ್ಯಕ್ರಮ
ದೇವನಹಳ್ಳಿ: ಚಿಕ್ಕಬಳ್ಳಾಪುರದ ಆದಿ ಚುಂಚನಗಿರಿ ಶಾಖಾಮಠದಲ್ಲಿ ಹನುಮಜಯಂತಿ ಅಂಗವಾಗಿ ಡಿ.15ರಂದು ಶ್ರೀ ಗುರು ಸಂಸ್ಮರಣಾ ಕಾರ್ಯಕ್ರಮ ಹಾಗೂ ಒಂದು ಲಕ್ಷ ಮಂದಿ ಭಕ್ತರ ಸಂಗಮ ಸಮಾರಂಭ ಅಲ್ಲದೆ ಶ್ರೀ ವೀರಾಂಜನೇಯಸ್ವಾಮಿ ದೇವಾಲಯ ಆವರಣದಲ್ಲಿ ಐದು ಅಡಿ ಎತ್ತರದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಪಂಚಲೋಹ ಪ್ರತಿಮೆ ಪ್ರತಿಷ್ಠಾಪನಾ ಕಾರ್ಯ ನೆರವೇರಲಿದೆ ಎಂದು ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳನಾಥ ತಿಳಿಸಿದರು. ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಜಾನಪದ ಕಲಾ ಉತ್ಸವ ಆಯೋಜಿಸಿದ್ದು ಕೇರಳ, ತಮಿಳುನಾಡು, ಮಂಗಳೂರು ಹಾಗೂ ಮೈಸೂರು ಹಾಗೂ ಇತರ ಸ್ಥಳಗಳಿಂದ ಪ್ರಖ್ಯಾತಿ ಪಡೆದಿರುವ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ ತಿಳಿಸಿ ಶ್ರೀ ಆದಿ ಚುಚಂನಗಿರಿ ಮಹಾ ಸಂಸ್ಥಾನಮಠದ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳ ಸಾನಿಧ್ಯದಲ್ಲಿ ಎಲ್ಲ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಈ ಸಮಾರಂಭದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಸುಮಾರು ಒಂದು ಲಕ್ಷ ಮಂದಿ ಭಕ್ತರು ಆಗಮಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಠದ ಸಂಚಾಲಕರಾದ ಜಯರಾಂ, ವೆಂಕಟೇಶ್, ಲೋಕೇಶ್, ದೇವನಹಳ್ಳಿಯ ಜೆಡಿಎಸ್ ಮುಖಂಡ ಆರ್.ಎನ್.ಕೃಷ್ಣಮೂರ್ತಿ ಭಾಗವಹಿಸಿದ್ದರು. ಕಲ್ಯಾಣಕುಮಾರ್ ಸ್ವಾಗತ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

