ಬೆಂಗಳೂರು ಗ್ರಾಮಾಂತರ

ರೇಲ್ವೆ ಸೇತುವೆ ನಿರ್ಮಾಣ: ಕೇಂದ್ರ ಸಚಿವ ಖರ್ಗೆಗೆ ಸಂಸದ ಸುರೇಶ್ ಮನವಿ

Published On :

ಚನ್ನಪಟ್ಟಣ: ಪಟ್ಟಣದ ಎಲೆಕೇರಿ ಈ ಮೂಲಕ ಹಾಯ್ದು ಹೋಗುವ ಗ್ರಾಮಗಳ ಜನತೆಗೆ ರೇಲ್ವೆ ಗೇಟ್ ಬಹುದೊಡ್ಡ ಸಮಸ್ಯೆಯಾಗಿದ್ದು ಇದಕ್ಕೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ತ್ವರಿತವಾಗಿ ಈ ಮಾರ್ಗದಲ್ಲಿ ರೈಲ್ವೆ ಕೆಳ ಸೇತುವೆ ನಿರ್ಮಿಸುವಂತೆ ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಂಸದ ಡಿ.ಕೆ.ಸುರೇಶ್ ಒತ್ತಾಯಿಸಿದ್ದಾರೆ. ದೆಹಲಿಯ ರೈಲ್ವೆ ಭವನದಲ್ಲಿ ಸಚಿವರನ್ನು ಭೇಟಿ ಮಾಡಿದ  ಡಿ.ಕೆ.ಸುರೇಶ್, ಈ ಮೂಲಕ ಹತ್ತಾರ ಗ್ರಾಮಗಳಿಗೆ ಸಂಪರ್ಕಕಲ್ಪಿಸುವ ರಸ್ತೆ ಹಾಯ್ದು ಹೋಗಿದ್ದು, ಪಟ್ಟಣಕ್ಕೆ ಬರಲು ಈಭಾಗದ ಜನತೆ ರೈಲ್ವೆ ಗೇಟ್ ಬಳಿ ತಾಸುಗಟ್ಟಲೆ ಕಾಯುವಂತಾಗಿದೆ. ಈ ಭಾಗದ ಸಾರ್ವಜನಿಕರು ಹಲವಾರು ವರ್ಷಗಳಿಂದ ರೈಲ್ವೆ ಕೆಳ ಸೇತುವೆ ನಿರ್ಮಾಣಕ್ಕೆ ಆಗ್ರಹಿಸುತ್ತಿದ್ದು ಇನ್ನಾದರೂ ಇಲಾಖೆ ಗಮನ ಹರಿಸ ಬೇಕೆಂದು ಕೋರಿದರು.
ಸಮಸ್ಯೆ ಮನವರಿಕೆ: ಬೆಂಗಳೂರಿನಿಂದ ಶೆಟ್ಟಿಹಳ್ಳಿ ವರೆಗೆ ಜೋಡಿ ರೈಲುಮಾರ್ಗವಾದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಪ್ಯಾಸೇಂಜರ್ ಮತ್ತು ಸರಕು ಸಾಗಾಣಿಕಾ ವಾಹನಗಳು ಸಂಚರಿಸುತ್ತಿವೆ. ಇದರಿಂದಾಗಿ ಈ ಭಾಗದ ಸಾರ್ವಜನಿಕರಿಗೆ ಎಲೇಕೇರಿ ಗೇಟ್‌ಬಳಿ ಗಂಟೆಗಟ್ಟಲೆ ಕಾಯ್ದು ನಿಲ್ಲುವಂತಾಗಿದೆ ಎಂದು ಸಚಿವರಿಗೆ ಸಮಸ್ಯೆ ಮನವರಿಕೆ ಮಾಡಿ ಕೊಟ್ಟರು. ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಮುಖಂಡ ರಘುನಂದನ್ ರಾಮಣ್ಣ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.