ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರದ ವಿವಿಧೆಡೆ ಹನುಮ ಜಯಂತಿ

Published On :

ಕ.ಪ್ರ.ವಾರ್ತೆ ,  ದೊಡ್ಡಬಳ್ಳಾಪುರ , ಡಿ.14
ದೊಡ್ಡಬಳ್ಳಾಪುರ ನಗರ ಮತ್ತು ತಾಲೂಕಿನ ವಿವಿಧ ಹನುಮ ದೇವಾಲಯಗಳಲ್ಲಿ ಶನಿವಾರ ಹನುಮ  ಜಯಂತ್ಯುತ್ಸವವನ್ನು ವಿಶೇಷವಾಗಿ ಆಚರಿಸಲಾಗಿದೆ.
ದೇವಾಲಯಗಳಲ್ಲಿ ಕಾರ್ಯಕ್ರಮದ ಅಂಗವಾಗಿ ವಿವಿಧ ಪೂಜಾ ಕಾರ್ಯಕ್ರಮಗಳು ಹನುಮ ಸಂಕೀರ್ತನೆ, ಭಜನಾ ಕಾರ್ಯಕ್ರಮಗಳು ಏರ್ಪಾಟಾಗಿದ್ದವು. ಜೊತೆಗೆ ವಿಶೇಷ ಅಲಂಕಾರಗಳ ಮೂಲಕ ಹನುಮ ದೇವರ ಪೂಜಾ ಕಾರ್ಯಕ್ರಮಗಳು ನಡೆದವು.
ಬೆಳ್ಳಿ ಅಲಂಕಾರ: ಹನುಮ ಜಯಂತಿ ಅಂಗವಾಗಿ ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀನೆಲದಾಂಜನೇಯಸ್ವಾಮಿ ದೇವಾಲಯದಲ್ಲಿ ಶ್ರೀ ಸ್ವಾಮಿಗೆ ಬೆಳ್ಳಿ ಅಲಂಕಾರ ಮಾಡಲಾಗಿತ್ತು. ಬೆಳಗ್ಗಿನಿಂದಲೇ ಸಾವಿರಾರು ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಿ ಉದ್ಭವ ಮೂರ್ತಿಯ ದರ್ಶನ ಪಡೆದರು.
ವಿಶೇಷಾಲಂಕಾರ: ಇಲ್ಲಿಗೆ ಸಮೀಪದ ಬನ್ನಿಮಂಗಲ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಕೂಡ ಹನುಮ ಜಯಂತಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ದೇವನಹಳ್ಳಿ, ದೊಡ್ಡಬಳ್ಳಾಪುರ ಸೇರಿದಂತೆ ವಿವಿಧೆಡೆಯ ನೂರಾರು ಭಕ್ತಾದಿಗಳು ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಅದೇ ರೀತಿ ದೊಡ್ಡಬಳ್ಳಾಪುರ ನಗರದ ಅರಳುಮಲ್ಲಿಗೆ ಬಾಗಿಲು ಶ್ರೀ ಆಂಜನೇಯಸ್ವಾಮಿ ದೇವಾಲಯ, ರಾಮಣ್ಣನಬಾವಿ ಹನುಮ ದೇಗುಲ, ರಂಗಪ್ಪ ವೃತ್ತದ ಪುರಾತನ ಹನುಮದೇವಾಲಯ, ರೇಲ್ವೇ ಸ್ಟೇಷನ್ ವೃತ್ತದ ಹನುಮ ದೇವಾಲಯ, ತಾಲೂಕು ಕಚೇರಿ ಆವರಣದಲ್ಲಿರುವ ಆಂಜನೇಯಸ್ವಾಮಿ ದೇವಾಲಯ, ಕುಚ್ಚಪ್ಪನಪೇಟೆಯ ಶ್ರೀವೇಣುಗೋಪಾಲ ಸ್ವಾಮಿ ದೇವಾಲಯ, ರೋಜಿಪುರದ ವೀರಾಂಜನೇಯಸ್ವಾಮಿ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು, ವಿವಿದ ಬಗೆಯ ಅಲಂಕಾರಗಳನ್ನು ಮಾಡಲಾಗಿತ್ತು. ಹನುಮ ದೇವಾಲಯಗಳಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ನೆರೆದು ಶ್ರೀಸ್ವಾಮಿಯ ಕೃಪೆಗೆ ಪಾತ್ರರಾದರು. ಹಲವು ದೇವತಾ ಉತ್ಸವಗಳು ಕೂಡ ಏರ್ಪಾಟಾಗಿದ್ದವು.
ತಾಲೂಕಿನಾದ್ಯಂತ ಸಂಭ್ರಮ: ಅದೇ ರೀತಿ ತಾಲೂಕಿನ ಮೆಳೇಕೋಟೆ, ಲಿಂಗನಹಳ್ಳಿ ಕಂಬದ ಆಂಜನೇಯಸ್ವಾಮಿ, ಸಾಸಲು, ದೊಡ್ಡಬೆಳವಂಗಲ, ತೂಬಗೆರೆ,ಮಧುರೆ ಹೋಬಳಿಗಳ ವ್ಯಾಪ್ತಿಯ ಹಲವಾರು ಗ್ರಾಮಗಳ ಆಂಜನೇಯಸ್ವಾಮಿ ದೇವಾಲಯಗಳಲ್ಲೂ ಹನುಮ ಜಯಂತಿ ಆಚರಿಸಲಾಯಿತು. ಗ್ರಾಮಾಂತರ ಪ್ರದೇಶಗಳಲ್ಲಿ ಭಜನಾ ಕಾರ್ಯಕ್ರಮಗಳ ಮೂಲಕ ಹನುಮಸ್ತುತಿಯಲ್ಲಿ ತೊಡಗಿದ್ದ ಜನ ದೇವಾಲಯಗಳಿಗೆ ಭೇಟಿ ನೀಡಿ ಹನುಮ ದರ್ಶನ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.