ನೂತನ ಹೈಟೆಕ್ ಅಂಗನವಾಡಿ ಕೇಂದ್ರ
ಮಾಗಡಿ: ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ನೂತನ ಹೈಟೆಕ್ ಅಂಗನವಾಡಿ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ತಿಳಿಸಿದರು.
ಅವರು ತಾಲೂಕಿನ ಮಾಡಬಾಳ್ ಹೋಬಳಿಯ ಸುಂಕುತಿಮ್ಮನಪಾಳ್ಯದ ಬಳಿ ಸುಮಾರು 12 ಲಕ್ಷ ರು. ವೆಚ್ಚದಲ್ಲಿ ನೂತನ ಹೈಟೆಕ್ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡುತ್ತಾ ಗ್ರಾಮೀಣ ಮಕ್ಕಳು ಅಗತ್ಯ ಶಿಕ್ಷಣ ಪಡೆದರೆ ಸಮಾಜದಲ್ಲಿ ಸತ್ಪ್ರಜೆಗಳಾಗಬಹುದು. ಈ ನಿಟ್ಟಿನಲ್ಲಿ ಸಮಾಜ ಮುಖಿಯಾಗಲು ಅನುಕೂಲವಾಗುತ್ತದೆ. ಗ್ರಾಮೀಣ ಭಾಗದಲ್ಲಿ ಅಗತ್ಯ ಶಾಲಾ, ಕಾಲೇಜು ಕಟ್ಟಡಗಳ ನಿರ್ಮಾಣ,ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲು ಹೆಚ್ಚು ಒತ್ತು ನೀಡಿದ್ದು, ಅಗತ್ಯ ಕ್ರಮ ಕೈಗೊಂಡಿದ್ದೇನೆ ಎಂದರಲ್ಲದೆ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಗುತ್ತಿಗೆದಾರರು ಸಹ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬೇಕು. ಜತೆಗೆ ಗುಣಮಟ್ಟ ಕಾಪಾಡುವಂತೆ ಕರೆ ನೀಡಿದರು.
ತಾ.ಪಂ. ಅಧ್ಯಕ್ಷ ಜಿ.ಕೃಷ್ಣ, ಉಪಾಧ್ಯಕ್ಷೆ ಭಾರತಿ ಮಹದೇವಯ್ಯ, ಜಿ.ಪಂ. ಸದಸ್ಯ ವಿಜಯಕುಮಾರ್, ಮಾಡಬಾಳ್ ಗ್ರಾ.ಪಂ. ಅಧ್ಯಕ್ಷ ಮಂಜುನಾಥ್, ಸದಸ್ಯ ಶಿವಬೀರಯ್ಯ, ರಂಗನಾಥ್, ಎಂಜಿನಿಯರ್ ಗುರುಶಂಕರ್, ಜಯಕುಮಾರ್, ಮೋಹನ್, ಎಂ.ಎಚ್. ಶ್ರೀನಿವಾಸ್, ನಾಗರಾಜು, ನರಸೇಗೌಡ, ಶಿವಣ್ಣ, ರಂಗಸ್ವಾಮಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

