ಬೆಂಗಳೂರು ಗ್ರಾಮಾಂತರ

ಇಂದು ರೈತರಿಂದ ರಸ್ತೆತಡೆ

Published On :

ದೊಡ್ಡಬಳ್ಳಾಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ದೊಡ್ಡಬಳ್ಳಾಪುರ ತಾಲೂಕು ಘಟಕದ ನೇತೃತ್ವದಲ್ಲಿ ಡಿ.16ರ ಸೋಮವಾರ ಬೆಳಗ್ಗೆ 10.30ಕ್ಕೆ ತಾಲೂಕಿನ ದೊಡ್ಡಬೆಳವಂಗಲ ಬಸ್ ನಿಲ್ದಾಣದ ಬಳಿ ರೈತರಿಂದ ರಸ್ತೆ ತಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ, ರಾಷ್ಟ್ರೀಯ ಹೆದ್ದಾರಿ 207ರ ಅಗಲೀಕರಣಕ್ಕೆ ಭೂಮಿ ಮತ್ತು ಮನೆಗಳನ್ನು ಕಳೆದುಕೊಳ್ಳುವವರಿಗೆ ಸೂಕ್ತ ಪರಿಹಾರ ಮತ್ತು ಪುನರ್ವಸತಿ ನೀಡಲು ಒತ್ತಾಯಿಸಿ ಮತ್ತು ವಸತಿರಹಿತರಿಗೆ ಮನೆ, ನಿವೇಶನಕ್ಕಾಗಿ, ರೈತರ ಎಲ್ಲ ಸಾಲವನ್ನೂ ಮನ್ನಾ ಮಾಡುವಂತೆ  ಹಕ್ಕೊತ್ತಾಯ ಮಂಡಿಸಿ ಈ ಚಳವಳಿ ನಡೆಯುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ತಂಡದ ಭೇಟಿ, ಪರಿಶೀಲನೆ
ಕನಕಪುರ:
ಕೇಂದ್ರ ಸರ್ಕಾರದ ಯೋಜನೆಗಳು ಗ್ರಾಮೀಣ ಪ್ರದೇಶಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಆಗಮಿಸಿರುವ ಕೇಂದ್ರದ ಅಧಿಕಾರಿ ತಿಲಕನ್ ಮತ್ತು ತಂಡದವರು ಕನಕಪುರ ತಾಲೂಕಿನ ಕಾಡಹಳ್ಳಿ ವ್ಯಾಪ್ತಿಯ ಹಲವಾರು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಿ.ಜೆ.ನಾಯಕ್, ನೋಡಲ್ ಅಧಿಕಾರಿ ಶಶಿಕಲಾ, ಕಾಡಹಳ್ಳಿ ಉಮೇಶ್,ಪಿಡಿಓ ಮುನಿರಾಜು, ಚಂದ್ರಶೇಖರ್ ರಮೇಶ್, ಸಿದ್ದರಾಜು ಪಾಲ್ಗೊಂಡಿದ್ದರು. ಕೇಂದ್ರದ ಮಹಾತ್ವಾಕಾಂಕ್ಷೆಯ ಯೋಜನೆಗಳಾದ ನರೇಗಾ, ನಿರ್ಮಲ ಭಾರತ್ ಅಭಿಯಾನ್, ಇಂದಿರಾ ಆವಾಸ್ ಯೋಜನೆ, ನ್ಯಾಷನಲ್ ರೂರಲ್ ಲೈವ್ಲಿಹುಡ್ ಮಿಷನ್, ವೃದ್ಧಾಪ್ಯ, ವಿಧವಾ, ಅಂಗವಿಕಲ ವೇತನಗಳು ಸೇರಿದಂತೆ ಹಲವಾರು ಯೋಜನೆಗಳ ಅನುಷ್ಠಾನದ ಬಗ್ಗೆ ಪರಿಶೀಲನೆಯನ್ನು ತಿಲಕನ್ ತಂಡದವರು ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.