ಬೆಂಗಳೂರು ಗ್ರಾಮಾಂತರ

ಫಲಾಪೇಕ್ಷೆಯಿಲ್ಲದೆ ಮಾಡುವ ಸೇವೆ ಅತ್ಯಂತ ಪವಿತ್ರ

Published On :

ಕ.ಪ್ರ.ವಾರ್ತೆ ರಾಮನಗರ  ಡಿ.15
ಯಾವುದೇ ಫಲಾಪೇಕ್ಷೆಯಿಲ್ಲದೆ ಮಾಡುವ ಪ್ರಾಮಾಣಿಕ ಸೇವೆ ದೇವರ ಪೂಜೆಯಷ್ಟೇ ಪವಿತ್ರವಾದುದು.
ಇಂತಹ ಸೇವೆಯಿಂದ ಮಾನಸಿಕ ತೃಪ್ತಿ ದೊರೆಯುತ್ತದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ಸಿ. ರಾಜು ಅಭಿಪ್ರಾಯಪಟ್ಟರು.
ತಾಲೂಕಿನ ಹೆಗ್ಗಡಗೆರೆ ಗ್ರಾಮದಲ್ಲಿ ಮಹರ್ಷಿ ಇನ್‌ಸ್ಟಿಟ್ಯೂಟ್ ಆಫ್ ಮಾಸ್ಟರ್ ಮ್ಯಾನೇಜ್‌ಮೆಂಟ್ ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಾಲಕರ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾತ್ಮಾ ಗಾಂಧೀಜಿಯವರು ಕಂಡ ಕನಸನ್ನು ಸಾಕಾರಗೊಳಿಸಲು ಮತ್ತು ಯುಜನತೆಯಲ್ಲಿ ನಮ್ಮ ಸಂಸ್ಕೃತಿಯ ಅರಿವು ಮೂಡಲು ಇಂತಹ ಕಾರ್ಯಕ್ರಮಗಳ ಅಗತ್ಯ ಇದೆ. ಇಂತಹ ಶಿಬಿರಗಳಲ್ಲಿ ಯುವಕರು ಹೆಚ್ಚು ಹೆಚ್ಚು ಭಾಗವಹಿಸಬೇಕು ಎಂದು ಕರೆ ನೀಡಿದರು.
ಯುವಕರಲ್ಲಿರು ಅಗಾಧವಾದ ಶಕ್ತಿಯನ್ನು ಸದುಪಯೋಗಪಡಿಸಿಕೊಳ್ಳಲು ಇಂತಹ ಶಿಬಿರಗಳು ಅತ್ಯಗತ್ಯ. ಸೇವಾ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಬದುಕಿನ ಮೌಲ್ಯಗಳನ್ನು ರೂಪಿಸಿಕೊಳ್ಳುವ ಗುಣ ಕಲಿಸಿಕೊಡುವ ಯುಜನೋತ್ಸವದ ಲಾಭವನ್ನು ತಾವೆಲ್ಲ ಪಡೆದುಕೊಂಡು ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಬೇಕೆಂದು  ಮಹರ್ಷಿ ಇ್‌ನ್‌ಸ್ಟ್ಟಿಟ್ಯೂಟ್ ಆಫ್ ಮಾಸ್ಟರ್ ಮ್ಯಾನೇಜಮೆಂಟ್‌ನ ನಿರ್ದೇಶಕಿ ಡಾ.ಹೇಮಲತಾ ಬಿ. ಕಳಸಣ್ಣವರ ತಿಳಿಸಿದರು.
ತಾ.ಪಂ. ಸದಸ್ಯೆ ಶೀಲಮ್ಮ, ಗ್ರಾ.ಪಂ. ಅಧ್ಯಕ್ಷೆ ಲಲಿತಾ ಚಂದ್ರಶೇಖರ, ಉಪಾಧ್ಯಕ್ಷ ಗೋವಿಂದಪ್ಪ, ಮಾಜಿ ಅಧ್ಯಕ್ಷ ದೇವರಾಜ, ಸ್ಥಳೀಯ ಮುಖಂಡ  ಶಾಂತಕುಮಾರ, ಬಿ.ಶಿವಾನಂದ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಸಿ.ಆರ್.ದಿನೇಶ, ಸಂಯೋಜನಾಧಿಕಾರಿ ಕೆ.ಎನ್. ಶಿವಮಾದಯ್ಯ, ಭರತ್‌ಕುಮಾರ್, ಸಿದ್ದಲಿಂಗಪ್ಪ ಬೀಲಳಗಿ, ಶರಣಪ್ಪ ಹೊಲಗೇರಿ  ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.