ಇಂದಿನಿಂದ ವಾರ್ಡ್ ಸಂಪರ್ಕ ಸಭೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ 31 ವಾರ್ಡ್ಗಳಲ್ಲಿ ಸಾರ್ವಜನಿಕರ ಸಮಾಲೋಚನಾ ಸಭೆಗಳು ಶಾಸಕ ಟಿ.ವೆಂಕಟರಮಣಯ್ಯ ಮತ್ತು ಪೌರಾಯುಕ್ತ ಬಿಳಿಕೆಂಚಪ್ಪ ನೇತೃತ್ವದಲ್ಲಿ ಡಿ.16ರ ಸೋಮವಾರ ಉದ್ಘಾಟನೆ ಗೊಳ್ಳಲಿವೆ. ಡಿ.16ರ ಸೋಮವಾರದಿಂದ ಡಿ.23ರವರೆಗೆ ವಿವಿಧ ವಾರ್ಡ್ಗಳಲ್ಲಿ ಸಭೆಗಳನ್ನು ನಡೆಸಲಾಗುವುದು. ನಾಗರೀಕರ ಕುಂದುಕೊರತೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಉದ್ದೇಶದಿಂದ ಸಭೆ ನಡೆಸಲಾಗುತ್ತಿದೆ. ಸೋಮವಾರ ವಾರ್ಡ್ ನಂ.3, 5, 6, 26 ಮತ್ತು 25ರಲ್ಲಿ, ಮಂಗಳವಾರ ವಾರ್ಡ್ ನಂ 23, 24, 4, 2 ಮತ್ತು 27ರಲ್ಲಿ, ಬುಧವಾರ ವಾರ್ಡ್ ನಂ.28, 1, 31, 30 ಮತ್ತು 29ರಲ್ಲಿ, ಗುರುವಾರದಂದು ವಾರ್ಡ್ ನಂ.22, 16, 17ರಲ್ಲಿ, ಶುಕ್ರವಾರದಂದು ವಾರ್ಡ್ ನಂ.21, 7 ಮತ್ತು 8ರಲ್ಲಿ, ಶನಿವಾರದಂದು ವಾರ್ಡ್ ನಂ.14, 15, 13, 9 ಮತ್ತು 10ರಲ್ಲಿ ಮತ್ತು ಮುಂದಿನ ಸೋಮವಾರ ವಾರ್ಡ್ ನಂ.12, 11, 19, 20 ಮತ್ತು 18ರಲ್ಲಿ ಸಭೆಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
ತಾಲೂಕು ಮಟ್ಟದ ಪ್ರತಿಭಾ ಕಾರಂಜಿ
ದೊಡ್ಡಬಳ್ಳಾಪುರ: ಬೆಂ.ಗ್ರಾ.ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಡಿ.16ರ ಸೋಮವಾರ ಬೆಳಗ್ಗೆ 10 ಗಂಟೆಗೆ ಇಲ್ಲಿನ ಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.ಶಾಸಕ ಟಿ.ವೆಂಕಟರಮಣಯ್ಯ ಉದ್ಘಾಟಿಸಲಿದ್ದು, ನಗರಸಭಾ ಸದಸ್ಯೆ ಶಂಶುನ್ನೀಸಾ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಮತ್ತು ಸ್ತಳೀಯ ಸಂಸ್ಥೆಸದಸ್ಯರು ಭಾಗವಹಿಸಲಿದ್ದಾರೆ.
ರಕ್ತದಾನ ಶಿಬಿರ ಇಂದು
ದೊಡ್ಡಬಳ್ಳಾಪುರ: ಇಲ್ಲಿನ ಜೆಡಿಎಸ್ ನಗರ ಮತ್ತು ತಾಲೂಕು ಯುವ ಘಟಕಗಳ ನೇತೃತ್ವದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ 55ನೇ ಹುಟ್ಟುಹಬ್ಬದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಸಸಿ ನೆಡುವ ಕಾರ್ಯಕ್ರಮ ಡಿ.16ರ ಸೋಮವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ನಗರಸಭೆ 27ನೇ ಡಿವಿಜನ್ನ ಸೊಬಗು ಚಿತ್ರಮಂದಿರ ರಸ್ತೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ಬೆಳಗ್ಗೆ 8.30ರಿಂದ ಆರಂಭವಾಗಲಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದ್ದು, ಕುಮಾರಸ್ವಾಮಿ ಅಭಿಮಾನಿಗಳು ಭಾಗವಹಿಸುವಂತೆ ಕೋರಲಾಗಿದೆ.
ಸರ್ಕಾರದ ಸವಲತ್ತುಬಳಸಿಕೊಳ್ಳಿ
ವಿಜಯಪುರ: ಮನೆಗೊಂದು ಮರ ಎನ್ನುವಂತೆ ಪ್ರತಿಯೊಬ್ಬರು ನಿವಾಸಗಳ ಸುತ್ತಮುತ್ತಲಿನಲ್ಲಿ ಸಸ್ಯರಾಶಿಯನ್ನು ಬೆಳೆಸುವುದರಿಂದ ಪರಿಸರ ಸಂರಕ್ಷಣೆಯೊಂದಿಗೆ, ಮುಂದಿನ ಪೀಳಿಗೆಗೂ ಸಾಕಷ್ಟು ಅನುಕೂಲವಾಗುತ್ತದೆ ಎಂದು ಹಾರೋಹಳ್ಳಿ ಗ್ರಾ.ಪಂ ಅಧ್ಯಕ್ಷ ಸುಬ್ಬಣ್ಣ ತಿಳಿಸಿದರು. ಅವರು ಪಟ್ಟಣ ಸಮೀಪದ ಹಾರೋಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರೌಢಶಾಲೆ ಆವರಣದಲ್ಲಿ 8ನೇ ತರಗತಿ ಮಕ್ಕಳಿಗೆ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಪ್ರತಿ ಮಕ್ಕಳು ಶಿಕ್ಷಣದಲ್ಲಿ ಅಭಿವೃದ್ಧಿ ಹೊಂದಿ ಗ್ರಾಮಕ್ಕೆ ಕೀರ್ತಿ ತರಬೇಕು ಎಂದರು. ಇದೇ ಸಂದರ್ಭದಲ್ಲಿ ಮಾತನಾಡಿದ ತಾ.ಪಂ.ಮಾಜಿ ಅಧ್ಯಕ್ಷ ಶಿವಪ್ಪ ಇತ್ತೀಚಿನ ದಿನಗಳಲ್ಲಿ ಇನ್ಸ್ಫೈರ್ ಅವಾರ್ಡ್ನ್ನು ಇಲ್ಲಿನ ವಿದ್ಯಾರ್ಥಿಗಳು ತಮ್ಮ ದಾಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಇದರ ಹಿಂದೆ ಇಲ್ಲಿನ ಶಿಕ್ಷಕರ ಪಾತ್ರ ಸಾಕಷ್ಟಿದೆ ಎಂದ ಅವರು ಮಕ್ಕಳ ಸರ್ವತೋಮುಖ ಏಳಿಗೆಯ ಉದ್ದೇಶದಿಂದ ಸರ್ಕಾರದಿಂದ ಸೌಲಭ್ಯಗಳು ದೊರೆಯುತ್ತಲಿದ್ದು ಇದನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ಸಾಧನೆ ಗೈಯುವ ಮೂಲಕ ರಾಷ್ಟ್ರಕ್ಕೆ ಕೊಡುಗೆಯಾಗಬೇಕು ಎಂದು ಕಿವಿ ಮಾತು ಹೇಳಿದರು.ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ್ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಯಲನ್ನು ಶಾಲೆಯ ಮರು ನಿರ್ಮಾಣಕ್ಕೆ ಅನುಕೂಲ ಮಾಡಿ ಕೊಡಬೇಕು. ಈಗಿನ ಶಾಲೆಯಲ್ಲಿ ಕೊಠಡಿಗಳ ಕೊರತೆ ಶೌಚಾಲಯ ಆಟದ ಮೈದಾನ ಕೊರತೆ ಇದೆ ಎಂದು ಮನವರಿಕೆ ಮಾಡಿಕೊಟ್ಟರು. ಸಮಾರಂಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ವೀರಭದ್ರಪ್ಪ, ಸಿಆರ್ಪಿ ಚಂದ್ರಶೇಖರ್ ಹಡಪದ್ ಗ್ರಾಮ ಪಂಚಾಯಿತಿ ಸದಸ್ಯರು, ರೋಹಿಣಿ ವಿಕ್ಟೋರಿಯ ಹಾಗೂ ಸಹಶಿಕ್ಷಕ ವೃಂದ, ಗ್ರಾಮದ ಮುಖ್ಯಸ್ಥರು ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

