ತಾಲೂಕು ಮಟ್ಟದ ಪ್ರತಿಭಾ ಕಾರಂಜಿ
ವಿಜಯಪುರ: ಯಾವುದೇ ರಾಷ್ಟ್ರ ಅಭಿವೃದ್ಧಿ ಪತಥತ್ತ ಸಾಗಬೇಕಾದರೆ ಶಿಕ್ಷಣ ಅತಿಮುಖ್ಯ. ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಷ್ಟೇ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರವು ಮಕ್ಕಳು ಪೋಷಕರಿಗೆ ಹೊರೆಯಾಗದ ರೀತಿಯಲ್ಲಿ ಸಾಕಷ್ಟು ಸೌಲಭ್ಯಗಳನ್ನು ಮಕ್ಕಳ ಸರ್ವತೋಮುಖ ಬೆಳವಣಿಗೆಗೆಂದು ನೀಡುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮುನಿರಾಜು ತಿಳಿಸಿದರು. ಅವರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳಲ್ಲಿನ ಪ್ರತಿಭೆಗಳನ್ನು ಶಿಕ್ಷಕರು ಗಮನಿಸುವುದರೊಂದಿಗೆ ಪೋಷಕರು ಪ್ರೋತ್ಸಾಹಿಸಬೇಕು. ಇದಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಾ ಮುನಿರಾಜು ಮಾತನಾಡಿ, ಪ್ರತಿ ಮಕ್ಕಳು ತಮ್ಮ ತಮ್ಮ ಜಾಣ್ಮೆಯನ್ನು ಪ್ರದರ್ಶಿಸಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರದಲ್ಲಿ ತಮ್ಮ ಶಾಲೆಯ ಕೀರ್ತಿ ಪತಾಕೆಯನ್ನು ಹಾರಿಸಬೇಕು ಎಂದರು. ಎಸ್‌ಡಿಎಂಸಿ ಅಧ್ಯಕ್ಷ ದೇವರಾಜು, ಹಾರೋಹಳ್ಳಿ ಗ್ರಾಪಂ ಅಧ್ಯಕ್ಷ ಸುಬ್ಬಣ್ಣ, ಕಾಲೇಜಿನ ಉಪಪ್ರಾಂಶುಪಾಲ ರಾಮಚಂದ್ರ, ಪುರಸಭಾ ಸದಸ್ಯ ಭಾಸ್ಕರ್, ವರದರಾಜು, ಶ್ರೀನಿವಾಸ್, ಭಾರತಿ ಮುನಿಕೃಷ್ಣಪ್ಪ, ಪಿಎಲ್‌ಡಿ ಬ್ಯಾಂಕ್ ವೀರಭದ್ರಯ್ಯ, ಸದಣ್ಣ, ಶಿಕ್ಷಕರ ಸಂಘದ ವೆಂಕಟಾಚಲಯ್ಯ, ಎಚ್.ಎನ್. ನಾಗೇಶ್, ಶಿಕ್ಷಕ ಕೋಟ್ರೇಶ್ ಇತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

