ಬೆಂಗಳೂರು ಗ್ರಾಮಾಂತರ

ಮಕ್ಕಳಿಂದ ಅಟ್ಟುಗುಣಿ ದೀಪೋತ್ಸವ

Published On :

ದೇವನಹಳ್ಳಿ: ಇಲ್ಲಿನ ಎಎಸ್‌ವಿ ನಗರ್ತ ಸಂಘ ಹಾಗೂ ನಗರ್ತ ಮಹಿಳಾ ಸಂಘದ ಸಂಯುಕ್ತ ಆಶ್ರಯದಲ್ಲಿ ಹತ್ತು ವರ್ಷದೊಳಗಿನ ಚಿಕ್ಕ ಚಿಕ್ಕ ಹೆಣ್ಣು ಮಕ್ಕಳಿಗಾಗಿಯೇ ಮೀಸಲಾಗಿರುವ ಧಾರ್ಮಿಕ ಅಟ್ಟು ಗುಣಿ ದೀಪೋತ್ಸವದ ಸಮಾರಂಭ ಮಂಗಳವಾರ ಸಂಜೆ ಶ್ರೀ ನಗರೇಶ್ವರ ಕಲ್ಯಾಣ ಮಂದಿರದಿಂದ ಆರಂಭಗೊಂಡು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆದು ಸುಮಾರು 40 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಹೆಣ್ಣುಮಕ್ಕಳ ಶ್ರೇಯಸ್ಸಿಗಾಗಿಯೇ ಪ್ರತಿ ವರ್ಷ ಮಾರ್ಗಶಿರ ಮಾಸದ ಹುಣ್ಣಿಮೆ ದಿನದಂದು ಅಟ್ಟುಗುಣಿ ದೀಪೋತ್ಸವ ಆಚರಿಸಲಾಗುವುದು ಎಂದು ಮಹಿಳಾ ಸಂಘದ ಹಿರಿಯ ಮಹಿಳೆ ಶಾರದಮ್ಮ ತಿಳಿಸಿದರು. ಮಹಿಳಾ ಸಂಘದ ಅಧ್ಯಕ್ಷೆ ಸುಜಾತಮ್ಮ ಹಾಗೂ ಮಹಿಳಾ ಸಂಘದ ಸದಸ್ಯರು ಭಾಗವಹಿಸಿದ್ದರು.

ರಕ್ತದಾನ ಶಿಬಿರ
ದೊಡ್ಡಬಳ್ಳಾಪುರ:
ಇಲ್ಲಿನ ಜಾತ್ಯತೀತ ಜನತಾದಳದ ದೊಡ್ಡಬಳ್ಳಾಪುರ ನಗರ ಮತ್ತು ತಾಲೂಕು ಯುವ ಘಟಕಗಳ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 55ನೇ ಹುಟ್ಟುಹಬ್ಬದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಹಲವಾರು ಮಂದಿ ಯುವ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಅದೇ ರೀತಿ ಇಲ್ಲಿನ ರೋಜಿಪುರ-ಗಂಗಾಧರಪುರ ಬಡಾವಣೆ 27ನೇ ವಾರ್ಡ್‌ನ ಸೊಬಗು  ಚಿತ್ರಮಂದಿರ ರಸ್ತೆಯಲ್ಲಿ ಕುಮಾರಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ರಸ್ತೆ ಬದಿ ಮತ್ತು ಶಾಲಾ ಅಂಗಳದಲ್ಲಿ ಹಲವು ಗಿಡಗಳನ್ನು ನೆಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.