ಕನ್ನಡ ಕೇವಲ ಭಾಷೆಯಲ್ಲ, ಸಂಸ್ಕೃತಿ
ಮಾಗಡಿ: ಕನ್ನಡ ಕೇವಲ ಭಾಷೆಯಲ್ಲ, ಸಂಸ್ಕೃತಿ,ನಮ್ಮ ಬದುಕಿನ ಭಾವನೆಯಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಎಂ.ಕೆ. ಧನಂಜಯ ನುಡಿದರು.
ಅವರು ಇಲ್ಲಿನ ಕಲ್ಕೆರೆ ಗ್ರಾಮದಲ್ಲಿ ಸ್ನೇಹಜೀವಿ ಗೆಳೆಯರ ಕನ್ನಡ ಬಳಗ ಸೋಮವಾರ ಸಂಜೆ ಏರ್ಪಡಿಸಿದ್ದ ಪ್ರಥಮ ವರ್ಷದ ಅದ್ಧೂರಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಹಾಗೂ ರಸ ಸಂಜೆ ಸಂಗೀತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಪ್ರಾಚೀನ ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಕನ್ನಡಿಗರು ಸ್ವಾಭಿಮಾನಿಗಳಾಗಬೇಕು. ಕನ್ನಡಿಗರು, ನಾಡು, ನುಡಿ, ಜಲ, ನೆಲ, ಸಂಸ್ಕೃತಿಯ ವಾರಸುದಾರರು. ಇದನ್ನು ಉಳಿಸಿ ಬೆಳೆಸಿ ಸಂರಕ್ಷಿಸಬೇಕಾದ ಕರ್ತವ್ಯ ಕನ್ನಡಿಗರದು ಎಂದರು.
ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ನರಸಿಂಹಮೂರ್ತಿ ಮಾತನಾಡಿ ಗ್ರಾಮೀಣ ಭಾಗದ ಯುವಕರು ಹೋರಾಟ ಮನೋಭಾವ ಬೆಳಸಿಕೊಳ್ಳಬೇಕು. ಕಾವೇರಿ ನೀರಿಗಾಗಿ ಎಲ್ಲಡೆ ಕನ್ನಡಿಗರ ಹೋರಾಟ ನಡೆದಿದೆ. ರಾಜ್ಯದ ಸಮಸ್ಯೆ ಬಗೆಹರಿಸಲು, ತಾಲೂಕಿಗೆ ಹೇಮಾವತಿ ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ಯುವಕರು ಹೋರಾಟದ ಹಾದಿ ಹಿಡಿಯಬೇಕಿದೆ. ಆಗ ಮಾತ್ರ ಕ್ಷೇತ್ರಕ್ಕೆ ಶಾಶ್ವತವಾದ ನೀರಾವರಿ ಯೋಜನೆ ಅನುಷ್ಠಾನ ಸಾಧ್ಯವಿದೆ ಎಂದರಲ್ಲದೆ ಪೂರ್ವದಲ್ಲಿ ಕನ್ನಡ ಸಾಹಿತ್ಯ, ಮನಸ್ಸುಗಳನ್ನು ಬೆಸೆಯುತ್ತಿದ್ದವು. ಈಗ ಕಾಲ ಬದಲಾಗಿದೆ. ಕಾಲಕ್ಕೆ ತಕ್ಕಂತೆ ನಡೆಯಬೇಕಿದೆ. ರಸ ಸಂಜೆ ಸಂಗೀತ ಕಾರ್ಯಕ್ರಮದ ರಸದೌತಣ ಯುವಕರ ಭಾವನೆಗಳಿಗೆ ಧಕ್ಕೆಯಾಗದಿರಲಿ. ಆಧುನಿಕತೆಗೆ ಮಾರು ಹೋಗಬೇಡಿ, ಸಂಸ್ಕೃತಿ ಆಚರಣೆ ಇರಲಿ, ಕನ್ನಡ ಕಟ್ಟಿ ಬೆಳೆಸಿ, ಗ್ರಾಮಾಭಿವೃದ್ಧಿಗೆ ನಿಮ್ಮ ಶಕ್ತಿ ಬಳಸಿ, ದೇಶ ಪ್ರೇಮ, ದೇಶ ಭಕ್ತಿ ಬೆಳಿಸಿಕೊಂಡು ಭಾವೈಕ್ಯತೆಯನ್ನು ಸಾರುವಂತೆ ಯುವಕರಿಗೆ ಕರೆ ನೀಡಿದರು.
ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮುದ್ದುರಾಜ ಯಾದವ್, ಸದಸ್ಯ ವಿಜಯಕುಮಾರ್, ತಾ.ಪಂ. ಅಧ್ಯಕ್ಷ ಜಿ. ಕೃಷ್ಣ, ಉಪಾಧ್ಯಕ್ಷೆ ಭಾರತಿ ಮಹದೇವಯ್ಯ, ಸದಸ್ಯ ಪೊಲೀಸ್ ರಾಮಣ್ಣ, ಚಿಕ್ಕಮುದಿಗೆರೆ ಗ್ರಾ.ಪಂ. ಅಧ್ಯಕ್ಷ ಆರ್.ಜೆ. ರವೀಶ್, ಪುರಸಭಾ ಮಾಜಿ ಅಧ್ಯಕ್ಷ ಎಚ್.ಜೆ. ಪುರುಷೋತ್ತಮ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಶಿಕ್ಷಕ ನರಸಿಂಹಮೂರ್ತಿ, ಜೆಡಿಎಸ್ ಮುಖಂಡರಾದ ರಮೇಶ್, ಮೂರ್ತಿ, ನಾಗರಾಜು, ಸ್ನೇಹ ಜೀವಿ ಗೆಳೆಯರ ಬಳಗದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

