ಬೆಂಗಳೂರು ಗ್ರಾಮಾಂತರ

ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ: ಬಾಲಕೃಷ್ಣ

Published On :

ಮಾಗಡಿ: ಬೇಸಿಗೆ ಸಮೀಪಿಸುತ್ತಿದ್ದು, ಗ್ರಾಮೀಣ ಭಾಗದ ಜನತೆಗೆ ವೈ.ಜಿ. ಗುಡ್ಡದ ಜಲಾಶಯದಿಂದ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ನುಡಿದರು. ಅವರು ತಾಲೂಕಿ ಹೇಳಿಗೆಹಳ್ಳಿ ಕಾಲೋನಿಯಲ್ಲಿ ಸುಮಾರು 10 ಲಕ್ಷ ರು ವೆಚ್ಚದ ನೂತನ ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಾ ಈಗಾಗಲೇ ವೈ.ಜಿ. ಗುಡ್ಡದ ಜಲಾಶಯದಿಂದ ಈಗಾಗಲೇ 15 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಚಾಲನೆ ನೀಡಲಾಗಿದೆ. ಕುಡಿಯುವ ನೀರಿನ ಪೂರೈಕೆಯನ್ನು ಇನ್ನೂ  ಹೆಚ್ಚಿನ 18 ಹಳ್ಳಿಗಳಿಗೆ ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ  ನೂತನ ಓವರ್ ಹೆಡ್ ಟ್ಯಾಂಕ್ ನಿರ್ಮಿಸಲು ಸೂಕ್ತ ಕ್ರಮ ಕೈಗೊಂಡಿದ್ದೇನೆ ಎಂದರು. ಗುತ್ತಿಗೆದಾರರು ಆದಷ್ಟು ಬೇಗ ಟ್ಯಾಂಕ್ ನಿರ್ಮಾಣದ ಕಾಮಗಾರಿ ಹಮ್ಮಿಕೊಂಡು ಉತ್ತಮ ಗುಣಮಟ್ಟದ ಟ್ಯಾಂಕ್ ನಿರ್ಮಿಸಬೇಕು. ಕಳಪೆ ಕಾಮಗಾರಿ ನಡೆಸಿದರೆ ಅಧಿಕಾರಿಗಳನ್ನೇ ಹೊಣೆಗಾರಿಕೆ ಮಾಡಲಾಗುತ್ತದೆ ಎಂದರು. ಉದ್ಯಾನವನ ನಿರ್ಮಿಸಲು ಚಿಂತನೆ: ಮಂಚನಬೆಲೆ ಜಲಾಶಯದ ಡ್ಯಾಂ ಬಳಿ ಸುಮಾರು  ಅಂದಾಜು 1 ಕೋಟಿ  ರು. ವೆಚ್ಚದಲ್ಲಿ ಸುಂದರವಾದ ಉದ್ಯಾನವನ ನಿರ್ಮಿಸಲು ಚಿಂತಿಸಿದ್ದು, ಯೋಜನೆ ರೂಪಿಸಲಾಗುತ್ತಿದೆ. ಮಂಚನಬೆಲೆ ಕಾಲೋನಿಯ ಜನತೆಗೂ ಕುಡಿಯುವ ನೀರು ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕೊಳವೆ ಬಾವಿ ಕೊರೆಸಿ ಪಂಪ್ ಅಳವಡಿಸುವಂತೆ ಈಗಾಗಲೇ ಜಿ.ಪಂ.ಗೆ ಸೂಚನೆ ನೀಡಲಾಗಿದೆ ಎಂದರು.
ಕೈ ಜೋಡಿಸುವೆ: ಮಾಜಿ ಸಚಿವ ಎಚ್.ಎಂ.ರೇವಣ್ಣ ಕ್ಷೇತ್ರದಲ್ಲಿ 10 ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ.  ಕ್ಷೇತ್ರಕ್ಕೆ ಅವರ ಕೊಡುಗೆ ಅಗತ್ಯವಿದೆ. ಹೇಮಾವತಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಮಾಜಿ ಸಚಿವರು ಶ್ರಮಿಸಲಿ, ನಾವು ಕೈಜೋಡಿಸುವುದಾಗಿ ಶಾಸಕ ಎಚ್.ಸಿ. ಬಾಲಕೃಷ್ಣ ತಿಳಿಸಿದರು.  ತಾ.ಪಂ. ಅಧ್ಯಕ್ಷ ಜಿ.ಕೃಷ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್. ಕಾಂತರಾಜು, ಚಕ್ರಭಾವಿ ಸುಧೀಂದ್ರ, ಸಾತನೂರು ಗ್ರಾ.ಪಂ. ಅಧ್ಯಕ್ಷ ಮಂಜುನಾಥ್, ಗುತ್ತಿಗೆದಾರ ಬಾಲಕೃಷ್ಣ, ತಾ.ಪಂ. ಇಓ ಕೆ.ಬಿ. ಅಕ್ಕೋಜಿ, ಜಿ.ಪಂ. ಎಇಇ ರವಿ ಎಸ್. ಸೂರನ್, ಎಇ ಎಂಜೇರಪ್ಪ, ಮೂರ್ತಿ, ನಾಗರಾಜು, ಗಂಗಾಧರ್, ರವಿಕುಮಾರ್, ನರಸೇಗೌಡ, ಶಂಕರ್, ಕೃಷ್ಣಪ್ಪ, ಕುಮಾರ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.