ಬೆಂಗಳೂರು ಗ್ರಾಮಾಂತರ

ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಬೈಸಿಕಲ್ ವಿತರಣೆ

Published On :

ದೇವನಹಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ  ದೇವನಹಳ್ಳಿ ಸೂಲಿಬೆಲೆ ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿತ್ತು.
ಸಮಾರಂಭದ ಉಧ್ಘಾಟನೆಯನ್ನು ಶಾಸಕ ಪಿಳ್ಳಮುನಿಶಾಮಪ್ಪ ನೆರವೇರಿಸಿ ಇಲ್ಲಿನ ಶಾಲೆ ವಾತಾವರಣ ಯಾವುದೇ ಖಾಸಗೀ ಶಾಲೆಗಿಂತ ಕಡಿಮೆ ಇಲ್ಲ. ಅಲ್ಲದೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಯಾವೊಬ್ಬ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಈಗ ಬೈಸಿಕಲ್ ವಿತರಣೆ ಮಾಡುತ್ತಿರುವುದರಿಂದ ಎಲ್ಲ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆಗೆ ಹಾಜರಾಗಬೇಕು ಮತ್ತು ಬೈಸಿಕಲ್ ಇತರ ಕೆಲಸಗಳಿಗೆ ಉಪಯೋಗಿಸಬಾರದು ಎಂದು ತಿಳಿಸಿದರು.
ಸಭೆಯಲ್ಲಿದ್ದ ವಿದ್ಯಾರ್ಥಿನಿಯರು ತಮ್ಮ ಶಾಲೆಯಲ್ಲಿ ಇಂಗ್ಲಿಷ್ ಬೋಧಿಸುವ ಶಿಕ್ಷಕರು ಇಲ್ಲ, ಕೂಡಲೇ ಶಿಕ್ಷಕರನ್ನು ಶಾಲೆಗೆ ಕೊಡಿಸಿ ಎಂದು ಕೇಳಿದಾಗ ನಿಮ್ಮ ಬೇಡೆಕೆಯನ್ನು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮಾತನಾಡಿ ಶೀಘ್ರವೇ ಅಗತ್ಯ ಶಿಕ್ಷಕರನ್ನು ನೇಮಿಸಲಾಗುವುದು ಎಂದು ತಿಳಿಸಿದರು.  
ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಸುಧಾತಾಯಿ ವಹಿಸಿದ್ದರು. ತಾಲೂಕು ಜೆಡಿಎಸ್ ಅಧ್ಯಕ್ಷ ಮುನಿಶಾಮಯ್ಯ, ಪುರಸಭಾ ಸದಸ್ಯರಾದ ಜಿ.ಎ.ರವೀಂದ್ರ, ಗೋಪಾಲಕೃಷ್ಣ, ಗೋಪಾಲ್, ಶಶಿಧರ್,
ಶಾಂತಮ್ಮ ಹಾಗೂ ಮುಖ್ಯಾಧಿಕಾರಿ ಮಂಜುನಾಥ್ ಹಾಗೂ ಸಾಯಿಬಾಬು ಮತ್ತು ಕುಮಾರ್ ಉಪಸ್ಥಿತರಿದ್ದರು. ಶಿಕ್ಷಕಿ ಆರ್. ಶಿವಮ್ಮ ಶಾಲೆಯ ಪ್ರಗತಿಯ ವರದಿ ನೀಡಿದರು. ಹಿರಿಯ ಶಿಕ್ಷಕ ಅಶ್ವತ್ಥ್ ಸ್ವಾಗತ ಕೋರಿದರು. ಎಚ್.ಆರ್. ಸ್ವಾಮಿ ನಿರೂಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.