ಹುಟ್ಟು ಹಬ್ಬ ಪ್ರಯುಕ್ತ ಕಂಬಳಿ ವಿತರಣೆ
ಕನಕಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ದೊರೆಯಬೇಕು ಎಂಬ ಮಹತ್ವಾಕಾಂಕ್ಷೆಯಿಂದ ದುಡಿಯುತ್ತಿರುವ ಯುವ ಮುಖಂಡ ಡಿ.ಕೆ.ಸುರೇಶ್ ಅವರು ಇಂದಿನ ಯುವಪೀಳಿಗೆಗೆ ಆದರ್ಶವಾಗುವಂಥ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ರಾಮನಗರ ಜಿಪಂ ವಿರೋಧಪಕ್ಷದ ಮುಖಂಡ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಅವರು ಕನಕಪುರ ತಾಲೂಕಿನ ಅರಣ್ಯದಂಚಿನ ಗ್ರಾಮಗಳಾದ ಹೂಳ್ಯ, ಹೊಸದೊಡ್ಡಿ, ಚೀಲಂದವಾಡಿ ಮೊದಲಾದ ಕಡೆಗಳಲ್ಲಿ ಸಂಸದ ಡಿ.ಕೆ.ಸುರೇಶ್ರ 48ನೇ ಹುಟ್ಟು ಹಬ್ಬವನ್ನು ಹರಿಜನ, ಗಿರಿಜನರಿಗೆ ಕಂಬಳಿಗಳನ್ನು ವಿತರಿಸುವ ಮೂಲಕ ವಿನೂತನವಾಗಿ ನೆರವೇರಿಸಿದರು. ಕಾರ್ಯಕ್ರಮದ ಅಂಗವಾಗಿ ಉಯ್ಯಂಬಳ್ಳಿ ಹಾಗೂ ಕೋಡಿಹಳ್ಳಿ ಹೋಬಳಿಗಳಲ್ಲಿ ಸುಮಾರು ಎರಡು ಸಾವಿರ ಕಂಬಳಿಗಳ ವಿತರಣೆ ನಡೆಯಿತು.
ಬಹುಪಾಲು ಎಲ್ಲಾ ಗ್ರಾಮಗಳೂ ಕಾಂಕ್ರಿಟ್ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಕಂಡಿವೆ. ಇವುಗಳೊಂದಿಗೆ ಶಾಲಾ ಕಾಲೇಜುಗಳ ಸ್ಥಾಪನೆ, ದೇವಾಲಯಗಳ ಜೀರ್ಣೋದ್ಧಾರ, ಬಡಜನರಿಗೆ ನಿವೇಶನಗಳು ಮನೆಗಳ ವಿತರಣೆಯೂ ನಡೆದಿದೆ. ಎಲ್ಲವೂ ಯಾವುದೇ ಫಲಾಪೇಕ್ಷೆಯಿಲ್ಲದೆ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದ ಫಲವಾಗಿಯೇ ಇಂದು ಡಿ.ಕೆ.ಸುರೇಶ್ ಜನಾದರಣೀಯ ನಾಯಕರಾಗಿದ್ದು ಸಂಸದರಾಗಿ ಆಯ್ಕೆಗೊಂಡಿದ್ದಾರೆ ಇಕ್ಬಾಲ್ ಹುಸೇನ್ ನುಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

