ವೀರಾಪುರ ಸರ್ಕಾರಿ ಶಾಲೆಗೆ ಸುವರ್ಣ ಘಳಿಗೆ
ದೊಡ್ಡಬಳ್ಳಾಪುರ: ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಶುಕ್ರವಾರ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಸದಸ್ಯ ಡಾ.ಎಚ್.ಜಿ.ವಿಜಯಕುಮಾರ್ ಉದ್ಘಾಟಿಸಿದರು. ಈ ವೇಳೆ ಅವರು ಮಾತನಾಡಿ, ಸರ್ಕಾರಿ ಶಾಲೆಯೊಂದು ಯಶಸ್ವಿಯಾಗಿ 50 ವರ್ಷಗಳನ್ನು ಪೂರೈಸಿರುವುದು ಅರ್ಥಪೂರ್ಣ. ಸರ್ಕಾರ ಇಂದು ಶಾಲೆಗಳಿಗೆ ಅನೇಕ ಸವಲತ್ತುಗಳನ್ನು ನೀಡುತ್ತಿದೆ. ಗ್ರಾಮಾಂತರದ ಸರ್ಕಾರಿ ಶಾಲೆಗಳು ನಗರಗಳ ಖಾಸಗಿ ಶಾಲೆಗಳ ರೀತಿಯಲ್ಲೇ ಹಲವು ಸೌಲಭ್ಯ ಹೊಂದಿವೆ. ಆದರೆ ಜನರಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಇರುವ ಉದಾಸೀನ ಮತ್ತು ನಿರ್ಲಕ್ಷ್ಯ ಧೋರಣೆ ಬದಲಾಗಬೇಕು. ಎಲ್ಲ ಹಂತಗಳಲ್ಲಿ ಇಂದು ಖಾಸಗಿ ಶಾಲೆಗಳಿಗೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಸರಿ ಸಮಾನವಾದ ಪ್ರತಿಭಾ ಪ್ರದರ್ಶನ ನೀಡುವುದರೊಂದಿಗೆ ಸಮಾನ ಪೈಪೋಟಿ ನೀಡುತ್ತಿದ್ದಾರೆ. ಇದು ಅತ್ಯಂತ ಗಮನೀಯ ಬದಲಾವಣೆ ಎಂದರು.
ಸರ್ಕಾರಿ ಶಾಲೆಗಳಲ್ಲಿನ ಸವಲತ್ತುಗಳನ್ನು ಗ್ರಾಮಾಂತರದ ಮಕ್ಕಳು ಮತ್ತು ಪೋಷಕರು ಸದುಪಯೋಗಪಡಿಸಿಕೊಳ್ಳಬೇಕು. ಪ್ರತಿಭಾವಂತ ಶಿಕ್ಷಕರ ಮಾರ್ಗದರ್ಶನವನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ, ಶಾಲಾ ಸಿಬ್ಬಂದಿ ಮತ್ತು ಗ್ರಾಮದ ಸಾರ್ವಜನಿಕರ ವತಿಯಿಂದ ಸಮುದಾಯದ ಮತ್ತು ಶಾಲಾಭಿವೃದ್ಧಿಗೆ ಶ್ರಮಿಸಿದ ಶಿಕ್ಷಕರು, ಗ್ರಾಮದ ಹಿರಿಯರು, ಸ್ಥಳೀಯ ಕೈಗಾರಿಕೆಗಳಾದ ಬಿರ್ಲಾ ಸೂಪರ್, ರಿಟ್ಟಲ್, ಹಿಮ್ಮತ್‌ಸಿಂಗ್ ಕಾ ಸೀಡೆ, ಮ್ಯಾಕ್ ಎರೋದ ಹಲವು ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು. ಅದೇ ರೀತಿ ವಿವಿಧ ಶಾಲೆಗಳು 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಮುಖ್ಯ ಶಿಕ್ಷಕ ನರಸಿದೇವರು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆಯ ಮಂಜುಳಾ, ಮುಖಂಡರಾದ ಸುಬ್ಬೇಗೌಡ, ಸೇರಿದಂತೆ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಮತ್ತು ಶಾಲೆಯ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

