ಚಿಕನ್ ಕಾರ್ಖಾನೆ ದುರ್ವಾಸನೆ ತಡೆಗೆ ಒತ್ತಾಯಿಸಿ ಪ್ರತಿಭಟನೆ
ಹೊಸಕೋಟೆ: ತಾಲೂಕಿನ ಜಂಗಮಕೋಟೆ ರಸ್ತೆಯಲ್ಲಿರುವ ಗೋದ್ರೇಜ್ ಚಿಕನ್ ಕಾರ್ಖಾನೆ ಆಚೆ ಬಿಡುತ್ತಿರುವ ದುರ್ವಾಸನೆ ಪರಿಣಾಮದಿಂದಾಗಿ ಸುತ್ತಮುತ್ತಲಿನ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ತಾಲೂಕು ಎಸ್ಎಫ್ಐ, ಡಿವೈಎಫ್ಐ ಪದಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಸಿಪಿಎಂ ಅಧ್ಯಕ್ಷ ಹರೀಂದ್ರ, ಕಾರ್ಖಾನೆಯು 2 ವರ್ಷಗಳ ಹಿಂದೆ ಇಂತಹುದೇ ಚಟುವಟಿಕೆಯನ್ನು ನಡೆಸುತ್ತಿದ್ದುದನ್ನು ವಿರೋಧಿಸಿ ಗ್ರಾಮ ಪಂಚಾಯಿತಿ,ಪೊಲೀಸ್ ಠಾಣೆ, ಕಾರ್ಖಾನೆಯ ಆಡಳಿತ ಮಂಡಳಿಗೆ ದೂರು ನೀಡಿದ್ದ ಕಾರಣ ಸ್ಥಗಿತಗೊಳಿಸಲಾಗಿತ್ತು. ಆದರೆ 1 ತಿಂಗಳಿನಿಂದ ಮತ್ತೆ ಎಂದಿನಂತೆ ಪ್ರಾರಂಭಿಸಿರುವುದು ಖಂಡನೀಯ. ಪರಿಸರವನ್ನ ಹಾಳು ಮಾಡುವುದೇ ಅಲ್ಲದೆ ಸುತ್ತಮುತ್ತಲಿನ ಗ್ರಾಮಸ್ಥರ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗುತ್ತಿರುವುದರಿಂದ ಕಾರ್ಖಾನೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲೂಕು ಡಿವೈಎಫ್ಐ ಅಧ್ಯಕ್ಷ ಎಚ್.ಎನ್. ಮೋಹನ್ ಬಾಬು ಮಾತನಾಡಿ, ಸಮಸ್ಯೆ ಬಗೆಹರಿಸುವ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಸಂಘಟನೆ ಪ್ರತಿನಿಧಿಗಳು, ಕಾರ್ಖಾನೆಯ ಆಡಳಿತ ವರ್ಗದ ಅಧಿಕಾರಿಗಳ ಸಭೆ ಏರ್ಪಡಿಸಬೇಕು ಎಂದು ಆಗ್ರಹಿಸಿದರು. ಡಿವೈಎಫ್ಐ ಸೊನ್ನದೇನಹಳ್ಳಿ-ಸೋಂಪುರ ಘಟಕ ಅಧ್ಯಕ್ಷ ಎಂ.ಮುನಿರಾಜು, ತಾಲೂಕು ಸಮಿತಿ ಮುಖಂಡರಾದ ಶ್ರೀನಿವಾಸ್, ಮಂಜುನಾಥ, ರವಿಕುಮಾರ್ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

