'ಕಣ್ಣು ಮಣ್ಣಾಗಲು ಬಿಡದೆ ದಾನ ಮಾಡಿ'
ರಾಮನಗರ: ಮರಣ ನಂತರ ಕಣ್ಣನ್ನು ಮಣ್ಣಾಗಲು ಬಿಡದೆ, ಅವುಗಳನ್ನು ದಾನ ಮಾಡಿದರೆ ಇಬ್ಬರು ಅಂಧರಿಗೆ ದೃಷ್ಟಿ ನೀಡಿದ ಪುಣ್ಯ ನಿಮ್ಮದಾಗಲಿದೆ ಎಂದು ಬೆಂಗಳೂರಿನ ಕೆನರಾ ಬ್ಯಾಂಕ್ ಸಹಾಯಕ ಪ್ರಬಂಧಕ ಎಂ.ಜಯಶೀಲನ್ ಕಿವಿಮಾತು ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ರಾಮನಗರದ ಕೆನರಾ ಬ್ಯಾಂಕ್ ಶಾಖೆ ಹಾಗೂ ಅಪೋಲೋ ಮುನಿಕ್ಯ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ನೇತ್ರಾ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮಲ್ಲಿರುವ ಮೂಢನಂಬಿಕೆ ತೊರೆದು ಕಣ್ಣುಗಳನ್ನು ದಾನ ಮಾಡಬೇಕು ಎಂದರು.
ಇಂದಿನ ಆಧುನೀಕರಣ ಮತ್ತು ನಗರೀಕರಣದ ಜೀವನದಲ್ಲಿ ಮನುಷ್ಯ ಒತ್ತಡಕ್ಕೆ ಒಳಗಾಗುತ್ತಿದ್ದಾನೆ. ಬದಲಾದ ಜೀವನ ಶೈಲಿ, ಆಹಾರ ಪದ್ಧತಿಯಿಂದ ಮನುಷ್ಯ ಅನಾರೋಗ್ಯ ಪೀಡಿತವಾಗುತ್ತಿದ್ದಾನೆ. ಹಣಕ್ಕಿಂತ ಆರೋಗ್ಯ ಕಾಪಾಡಿಕೊಳ್ಳುವುದರತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ದೈನಂದಿನ ಜೀವನದಲ್ಲಿ ಕಣ್ಣಿಗೆ ಸೋಂಕು ಹೆಚ್ಚಾಗಿ ಕಂಡುಬರುತ್ತಿದ್ದು, ಬೇಸಿಗೆಯಲ್ಲಿ ಉಲ್ಬಣಗೊಳ್ಳುತ್ತವೆ. ಕೈಯನ್ನು ಶುಚಿಗೊಳಿಸಿ ಕಣ್ಣನ್ನು ಮುಟ್ಟುವುದರಿಂದ ಶೇ.50ರಷ್ಟು ಸೋಂಕನ್ನು ಕಡಿಮೆ ಮಾಡಬಹುದಾಗಿದೆ. ಸಕ್ಕರೆ ಕಾಯಿಲೆ ಇರುವ ರೋಗಿಗಳು ಪ್ರತಿವರ್ಷ ಕನಿಷ್ಠ ಒಂದು ಬಾರಿಯಾದರೂ ಕಣ್ಣನ್ನು ಪರೀಕ್ಷಿಸಿಕೊಳ್ಳಬೇಕು, ನಿರ್ಲಕ್ಷಿಸಿದರೆ ದೃಷ್ಟಿ ಕಳೆದಕೊಳ್ಳುವ ಅಪಾಯವಿರುತ್ತದೆ ಎಂದು ವಾಸನ್ ಐ ಕೇರ್ನ ಡಾ.ಗಂಗಾಧರ್ ಸಲಹೆ ನೀಡಿದರು.
ಮಕ್ಕಳಲ್ಲಿನ ದೃಷ್ಟಿದೋಷವನ್ನು ಚಿಕ್ಕವಯಸ್ಸಿನಲ್ಲಿಯೆ ನೇತ್ರ ತಜ್ಞರಲ್ಲಿ ಪರೀಕ್ಷೆ ಮಾಡಿಸಿ, ಚಿಕಿತ್ಸೆ ಪಡೆದು ಸರಿಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅವರು ಕಣ್ಣಿನ ದೃಷ್ಟಿಯನ್ನು ಕಳೆದುಕೊಳ್ಳುವ ಜತೆಗೆ ಕಣ್ಣಿಗೂ ಮೆದುಳಿಗೂ ನೇರ ಸಂಪರ್ಕವಿರುವುದರಿಂದ ಅವರಲ್ಲಿನ ಚುರುಕುತನ ಮಾಯವಾಗಿ ಮಂದಮತಿಗಳಾಗುವ ಅಪಾಯವಿರುತ್ತದೆ ಎಂದು ಎಚ್ಚರಿಸಿದರು.
ಶಿಬಿರದಲ್ಲಿ ಮುನ್ನೂರಕ್ಕೂ ಹೆಚ್ಚು ಮಂದಿ ಕಣ್ಣಿನ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಂಡರು. ವಾಸನ್ ಐ ಕೇರ್ನ ಮಹಬೂಬ್, ಕೆನರಾ ಬ್ಯಾಂಕ್ ಮಹಾ ಪ್ರಬಂಧಕ ಸುರೇಶ್ಕುಮಾರ್, ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾ.ಶಿ.ಬಸವರಾಜು ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

