ರೈತರೇ ಆರೋಗ್ಯದ ಬಗ್ಗೆ ಕಾಳಜಿ ಇರಲಿ: ಸಂಸದ
ಆನೇಕಲ್ಲು: ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರೈತ ಬಂಧುಗಳು ತಮ್ಮ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ವಹಿಸಬೇಕೆಂದು ಸಂಸದ ಸುರೇಶ್ ಮನವಿ ಮಾಡಿದ್ದಾರೆ.
ಅವರು ತಾಲೂಕಿನ ಬಮೂಲ್ ಟ್ರಸ್ಟ್ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಹೈನು ರೈತ ಕುಟುಂಬದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ಧನ ಚೆಕ್ ವಿತರಿಸಿ ಮಾತನಾಡಿ ಋತು ಬದಲಾವಣೆ ಸಮಯದಲ್ಲಿ ಧಾನ್ಯ ಒಕ್ಕಣೆ ಸಾಗಾಣೆಗೆ ನೀಡುವ ಮಹತ್ವವನ್ನೇ ಆರೋಗ್ಯದ ಕಡೆಗೂ ನೀಡಬೇಕೆಂದರು. ಬೆಂಗಳೂರು ಗ್ರಾಮಾಂತ ಲೋಕಸಭಾ ಕ್ಷೇತ್ರದಲ್ಲಿ ಶುದ್ಧ ಕುಡಿಯುವ ನೀರು ಘಟಕಗಳನ್ನು ಸ್ಥಾಪಿಸಲು ಸಜ್ಜಾಗಿದ್ದು ಆನೇಕಲ್ ಕ್ಷೇತ್ರಕ್ಕೂ ವಿಸ್ತರಿಸುವುದಾಗಿ ಹೇಳಿದರು. ಶಾಸಕ ಬಿ. ಶಿವಣ್ಣ ಮಾತನಾಡಿ ಬಮೂಲ್ ರೈತ ಕಲ್ಯಾಣ ಯೋಜನೆಗಳನ್ನು ಹಮ್ಮಿಕೊಂಡಿದ್ದು ಶ್ಲಾಘನೀಯ. ರಾಜ್ಯ ಸರ್ಕಾರ ಹೈನು ರೈತರಿಗೆ ಪ್ರತಿ ಲೀಟರ್ ಹಾಲಿಗೆ ರು. 4 ಪ್ರೋತ್ಸಾಹ ಧನ ನೀಡುತ್ತಿದೆ. ಸಂಪರ್ಕ ರಸ್ತೆ, ಸಾರಿಗೆ ವ್ಯವಸ್ಥೆ ಕಾಮಗಾರಿ ಪ್ರಗತಿಯಲ್ಲಿದ್ದು ಶಿಂಷಾ ಕುಡಿಯುವ ನೀರಿಗಾಗಿ ಸಂಸದರಿಗೆ ಒತ್ತಾಯ ಮಾಡಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

