ಬೆಂಗಳೂರು ಗ್ರಾಮಾಂತರ

ಲೋಕಸಭೆ ಚುನಾವಣೆಗೆ ಸ್ಪರ್ಧಿಸೊಲ್ಲ

Published On :

ರಾಮನಗರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲವೆಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.  
ಈ ಕುರಿತು ಒಂದೊಮ್ಮೆ ಮುಖಂಡರು ಮತ್ತು ಕಾರ್ಯಕರ್ತರು ಒತ್ತಡ ಹೇರಿದರೂ ತೀರ್ಮಾನ ಬದಲಿಸುವುದಿಲ್ಲ. ಅವರನ್ನೇ ಮನವೊಲಿಸಿ, ರಾಜ್ಯ ರಾಜಕಾರಣದಲ್ಲೇ ಮುಂದುವರೆಯುವೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು.
ಸ್ಪರ್ಧೆಗೆ ಇಳಿಯುವ ತವಕ ತಮಗೇನಿಲ್ಲ. ನನ್ನ ಗುರಿ ಏನಿದ್ದರೂ ರಾಜ್ಯಾದ್ಯಂತ ಪ್ರವಾಸ ನಡೆಸಿ, ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವುದಷ್ಟೇ ಆಗಿದೆ. ಈ ನಿಟ್ಟಿನಲ್ಲಿ ಕಾರ್ಯತಂತ್ರ, ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು.
ತೃತೀಯ ರಂಗಕ್ಕೆ ಜೆಡಿಎಸ್: ಬಿಜೆಪಿ ಮತ್ತು ಕಾಂಗ್ರೆಸ್ ಜತೆ ಸಮಾನ ಅಂತರ ಕಾಯ್ದುಕೊಂಡು, ತೃತೀಯ ರಂಗದಲ್ಲಿ ಪ್ರಮುಖ ಪಾತ್ರ ವಹಿಸಲು ಜೆಡಿಎಸ್ ಸಜ್ಜಾಗಿರುವ ಸಂಗತಿಯನ್ನು ಕುಮಾರಸ್ವಾಮಿ ಅವರು ಇದೇ ವೇಳೆ ಹೊರಗೆಡವಿದರು.
ಜನವರಿ ಅಂತ್ಯ ಇಲ್ಲವೇ ಫೆಬ್ರವರಿ ಪ್ರಾರಂಭದಲ್ಲಿ ಬೆಂಗಳೂರಿನಲ್ಲಿ ತೃತೀಯ ರಂಗದಲ್ಲಿ ಪಾತ್ರ ವಹಿಸುತ್ತಿರುವ 15ಕ್ಕೂ ಹೆಚ್ಚು ಅಂಗಪಕ್ಷಗಳ ನಾಯಕರನ್ನು ಆಹ್ವಾನಿಸಿ, 8-9 ಲಕ್ಷ ಜನರನ್ನು ಸೇರಿಸುವ ಮೂಲಕ
ಬೃಹತ್ ಸಮಾವೇಶ ಆಯೋಜಿಸುವುದಾಗಿ ಅವರು ಬಹಿರಂಗ ಪಡಿಸಿದರು.  ಇದಕ್ಕೂ ಮುನ್ನ ಜ.15ಕ್ಕೆ ಬೆಂಗಳೂರಿನಲ್ಲಿ ಪಕ್ಷದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಬೃಹತ್ ಸಮಾವೇಶ, ಜ.22ಕ್ಕೆ ಚಿತ್ರದುರ್ಗದಲ್ಲಿ ಮಹಿಳಾ ಸಮಾವೇಶ ಆಯೋಜನೆ ಮಾಡಲಾಗುವುದು. ತೃತೀಯ ರಂಗದ ಪಕ್ಷಗಳಿಗೆ ಒಂದೆರಡು ಸ್ಥಾನ ಬಿಟ್ಟುಕೊಟ್ಟು, ಉಳಿದೆಲ್ಲೆಡೆ ಜೆಡಿಎಸ್ ಕಣಕ್ಕಿಳಿಯಲಿದೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.