ಬೆಂಗಳೂರು ಗ್ರಾಮಾಂತರ

ವಾಜಪೇಯಿ ಹುಟ್ಟುಹಬ್ಬ ಇಂದು

Published On :

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕು ಮತ್ತು ನಗರ ಬಿಜೆಪಿ ಘಟಕಗಳ ನೇತೃತ್ವದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 89ನೇ ಜನ್ಮದಿನಾಚರಣೆ ಕಾರ್ಯಕ್ರಮ ಡಿ.25ರ ಬುಧವಾರ ನಡೆಯಲಿದೆ. ಬೆಳಗ್ಗೆ 6.30ಕ್ಕೆ ಇಲ್ಲಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ನಂತರ ಪದಾಧಿಕಾರಿಗಳ ಪದಗ್ರಹಣ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಬಿಜೆಪಿ ವಿವಿಧ ಘಟಕಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಇಂದು ನೀರಾವರಿಗಾಗಿ ಬೈಕ್ ರ್ಯಾಲಿ
ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿಯಲ್ಲಿ ನಡೆಯುತ್ತಿರುವ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ದೊಡ್ಡಬಳ್ಳಾಪುರ ನಗರ ಶಾಶ್ವತ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಡಿ.25ರ ಬೆಳಗ್ಗೆ 9 ಗಂಟೆಗೆ ನೆಲದಾಂಜನೇಯಸ್ವಾಮಿ ದೇವಾಲಯ ಮುಂಭಾಗದಿಂದ ಬೈಕ್ ರ್ಯಾಲಿ ಆರಂಭವಾಗಲಿದ್ದು, ಅರಳುಮಲ್ಲಿಗೆ ವೃತ್ತ, ಆಲಹಳ್ಳಿ, ಅರಳುಮಲ್ಲಿಗೆ, ಕಾಡನೂರು ಕೈಮರ, ಚೆನ್ನಾದೇವಿ ಅಗ್ರಹಾರ ಮೂಲಕ ಕನಸವಾಡಿ ತಲುಪಲಿದೆ. ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸುವಂತೆ ನಗರಸಮಿತಿ ಪ್ರಕಟಣೆ ತಿಳಿಸಿದೆ.
ಮಹದೇವ ನಾಯ್ಕಗೆ ಸನ್ಮಾನ
ಕನಕಪುರ: ಕನಕಪುರ ತಾಲೂಕಿನ ಲಂಬಾಣಿ ಬಂಜಾರ ಸಮುದಾಯದ ಮುಖಂಡ, ರಾಜ್ಯ ಕಟ್ಟಡ ಕಾರ್ಮಿಕ ಮಂಡಳಿ ಸದಸ್ಯರಾದ ಮಹದೇವ ನಾಯ್ಕ ಅವರನ್ನು ಕನಕಪುರ ತಾ.ಬಂಜಾರ ಲಂಬಾಣಿ ಸಂಘದ ವತಿಯಿಂದ ಇಲ್ಲಿನ ಲಕ್ಷ್ಮಣ್ ಲೇಔಟ್‌ನಲ್ಲಿರುವ ಸೇವಾಲಾಲ್ ಸಮುದಾಯ ಭವನದಲ್ಲಿ ಸನ್ಮಾನಿಸಲಾಯಿತು. ಸಮುದಾಯದ ಮುಖಂಡರಾದ ರಾಮಚಂದ್ರನಾಯ್ಕ, ಬಲರಾಮ ನಾಯ್ಕ, ಕೃಷ್ಣಾನಾಯಕ್,ಮಾದಾನಾಯ್ಕ, ಚಂದ್ರಾನಾಯ್ಕ, ಮರಸಪ್ಪರವಿ, ಶಂಭುಲಿಂಗ ಶೆಟ್ಟಿ ಪಾಲ್ಗೊಂಡಿದ್ದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಹದೇವನಾಯ್ಕ, ತಮ್ಮನ್ನು ಸಾಮಾಜಿಕವಾಗಿ ರಾಜಕೀಯವಾಗಿ ಬೆಳೆಸಿದ ಕೀರ್ತಿ ಶಾಸಕ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರಿಗೆ ಸಲ್ಲುತ್ತದೆ. ಕಾಂಗ್ರೆಸ್ ಪಕ್ಷವೂ ಅಲ್ಪಸಂಖ್ಯಾತರ ಅಭಿವೃದ್ಧಿ ದೃಷ್ಟಿಯಿಂದ ಮಹತ್ವದ ಸ್ಥಾನ ನೀಡಿ ಪುರಸ್ಕರಿಸಿದೆ. ಮುಖಂಡರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಸಮುದಾಯದ ಏಳಿಗೆಗಾಗಿ ಶ್ರಮವಹಿಸಿ ದುಡಿಯುತ್ತೇನೆ ಎಂದು ಹೇಳಿದರು. ಶಾಸಕರ ಮಾಧ್ಯಮ ಕಾರ್ಯದರ್ಶಿ ಮರಸಪ್ಪರವಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.