ಬೆಂಗಳೂರು ಗ್ರಾಮಾಂತರ

ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ

Published On :

ದೊಡ್ಡಬಳ್ಳಾಪುರ: ತಾಲೂಕಿನ ದರ್ಗಾಜೋಗಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಸಕ ಟಿ.ವೆಂಕಟರಮಣಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಸೈಕಲ್‌ಗಳನ್ನು ವಿತರಿಸಿದರು.
ಅವರು ಮಾತನಾಡಿ ಹಿಂದಿನ ಸರ್ಕಾರದ ಮಹತ್ವದ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಕೂಡ ಮುಂದುವರೆಸಿಕೊಂಡು ಹೋಗುತ್ತಿದೆ. ಅದೇ ರೀತಿ ಹೊಸ ಸರ್ಕಾರ ಅನೇಕ ಯೋಜನೆಗಳನ್ನು ಜನಹಿತಕ್ಕಾಗಿ ಜಾರಿಗೊಳಿಸುತ್ತಿದೆ. ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ಯೋಜನೆಗಳು ಇಂದು ಗ್ರಾಮೀಣ ಜನರಿಗೆ ವರದಾನವಾಗಿವೆ. ಸರ್ಕಾರಿ ಶಾಲೆಗಳ ಮಕ್ಕಳು ಇತರ ಖಾಸಗಿ ಶಾಲೆಗಳ ಮಕ್ಕಳಿಗೆ ಸರಿಸಮಾನವಾದ ವಿದ್ಯಾಭ್ಯಾಸ ಹೊಂದುವ ನಿಟ್ಟಿನಲ್ಲಿ ಸರ್ಕಾರ ಆನೇಕ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಸದುಪಯೋಗ ಆಗಬೇಕಿದೆ. ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಒತ್ತಾಸೆ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಸದಸ್ಯ ಟಿ.ವಿ.ಲಕ್ಷ್ಮೀನಾರಾಯಣ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಡಿ.ಎನ್.ತಿಮ್ಮರಾಜು, ಕಾಂಗ್ರೆಸ್ ಮುಖಂಡ ವೆಂಕಟೇಶ್ (ಅಪ್ಪಿ), ನಗರಸಭಾ ಸದಸ್ಯ ತಿಮ್ಮಣ್ಣ, ಮುಖಂಡರಾದ ವೆಂಕಟೇಶ್, ನಾಗಭೂಷಣ್ ಸೇರಿದಂತೆ ಸ್ಥಳೀಯ ಅನೇಕ ಮುಖಂಡರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.