ಬೆಂಗಳೂರು ಗ್ರಾಮಾಂತರ

ನಾಳೆ ದೇವನಹಳ್ಳಿಯಲ್ಲಿ ವಾಜಪೇಯಿ ಹುಟ್ಟುಹಬ್ಬ

Published On :

ದೇವನಹಳ್ಳಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟುಹಬ್ಬ ಅಂಗವಾಗಿ ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಅಲ್ಲದೆ ಬಡ ಕುಟುಂಬಗಳಿಗೆ ದಿನಬಳಕೆ ಪರಿಕರಗಳ ವಿತರಣೆ, ಕ್ರೀಡಾಪಟುಗಳಿಗೆ ಬಹುಮಾನ, ಅಂಧಮಕ್ಕಳಿಗೆ ಸ್ವೆಟರ್‌ಗಳ ವಿತರಣೆ, ಬಿಜೆಪಿ  ಹಿರಿಯ ಮುಖಂಡರಿಗೆ ಸನ್ಮಾನ ಸಮಾರಂಭ ಶುಕ್ರವಾರ ಆಯೋಜಿಸಲಾಗಿದೆ.
ಸಮಾರಂಭದ ನಂತರ ಸೂಲಿಬೆಲೆ ಚಕ್ರವರ್ತಿ ತಂಡದವರಿಂದ ನಮೋ ಭಾರತ್ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಬಿ.ಸಿ. ನಾರಾಯಣಸ್ವಾಮಿ ಬುಧವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದೇ ಸಂಧರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಡ್ಡಬಳ್ಳಾಪುರ ಪುಷ್ಪ ಶಿವಶಂಕರ್ ಮಾತನಾಡಿ ವಾಜಪೇಯಿ ಅವರ ಹುಟ್ಟು ಹಬ್ಬ ಆಚರಣೆ ಮಾಡುವುದು ಅವರ ಆದರ್ಶ ಮತ್ತು ವ್ಯಕ್ತಿತ್ವವನ್ನು ನಮ್ಮ ಕಾರ್ಯಕರ್ತರು ಸ್ವಲ್ಪವಾದರೂ ಅಳವಡಿಸಿಕೊಂಡರೆ  ಮಾತ್ರ ಹುಟ್ಟುಹಬ್ಬ ಆಚರಣೆಗೆ ಅರ್ಥ ಬರುತ್ತದೆ. ಆದ್ದರಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎಲ್ಲ ಬಿಜೆಪಿ ಕಾರ್ಯಕರ್ತರು ಮತ್ತು ದೇಶದ ಬಗ್ಗೆ ಅಭಿಮಾನ ಹೊಂದಿರುವ ಎಲ್ಲರೂ ಭಾಗವಹಿಸಬೇಕೆಂದು ತಿಳಿಸಿದರು.
 ಮಾಜಿ ಶಾಸಕ ಜಿ.ಚಂದ್ರಣ್ಣ ಮಾತನಾಡಿ ದೇಶದ ಆಡಳಿತದ ಬಗ್ಗೆ ಬದಲಾವಣೆಯನ್ನು ಮತದಾರರು ನಿರೀಕ್ಷಿಸುತ್ತಿದ್ದಾರೆ. ಅಲ್ಲದೆ ಬಿಜೆಪಿ ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿರವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಈಗಾಗಲೇ ಘೋಷಣೆ ಮಾಡಿದ್ದು ಇತರ ರಾಜಕೀಯ ಪಕ್ಷಗಳಿಗೆ ನಡುಕ ಹುಟ್ಟಿದ್ದು ಪ್ರಧಾನಿ ಅಭ್ಯರ್ಥಿಗಾಗಿ ತಡಕಾಟ ಆರಂಭಿಸಿದ್ದಾರೆ.  ಅಧಿಕಾರದ ಪರಿವರ್ತನೆ ಗಾಳಿ ಎಲ್ಲಡೆ ಬೀಸುತ್ತಿದೆ ಎಂದರು.
 ಡಿ.27 ರಂದು ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಮಾಜಿ ಸಚಿವರಾದ ಆರ್.ಅಶೋಕ್, ಬಿ.ಎನ್. ಬಚ್ಚೇಗೌಡ, ಅರವಿಂದ ಲಿಂಬಾವಳಿ, ಸಿ.ಟಿ.ರವಿ, ಮಾಜಿ ಶಾಸಕರಾದ ಎಸ್.ಆರ್. ವಿಶ್ವನಾಥ್, ಜಿ.ಚಂದ್ರಣ್ಣ ಹಾಗೂ ರಾಜ್ಯ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎಲ್ಲ ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ನಾಗೇಶ್ ತಿಳಿಸಿದರು.  ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಎ.ಸಿ.ಗುರುಸ್ವಾಮಿ, ಮುಖಂಡರಾದ ದೇ.ಸೂ.ನಾಗರಾಜ್, ತಾಲೂಕು ಅಧ್ಯಕ್ಷ ರಾಜಗೋಪಾಲ್, ಹನುಮಂತರಾಯಪ್ಪ, ಹುರುಳುಗುರ್ಕಿ ಶ್ರೀನಿವಾಸ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.