ರೈಲು ನಿಲ್ದಾಣಗಳಿಗೆ ಭೇಟಿ
ಆನೇಕಲ್ಲು: ಅಧಿಕಾರ ಸ್ವೀಕರಿಸಿದ 120 ದಿನಗಳಲ್ಲಿ 95 ದಿನಗಳ ಕಾಲ ಕರ್ನಾಟಕ ಸೇರಿದಂತೆ ದೇಶದ 60 ರೈಲು ನಿಲ್ದಾಣಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಕಂಡು ಆಲಿಸಿದ್ದೇನೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
ಇದೇ ಮೊದಲ ಬಾರಿಗೆ ಕೇಂದ್ರ ರೇಲ್ವೆ ಮಂಡಳಿ ಅಧ್ಯಕ್ಷ ಸ್ಥಾನ ದಕ್ಷಿಣ ಭಾರತದ, ಕನ್ನಡಿಗನಾದ ನನಗೆ ಲಭಿಸಿದೆ. ರಾಜ್ಯದಲ್ಲಿನ ಹಲವಾರು ರೈಲು ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಹೊರ ರಾಜ್ಯಗಳಲ್ಲಿ ರೈಲು ನಿಲ್ದಾಣ ಬಳಕೆ ಬಗ್ಗೆ, ಸ್ವಚ್ಛತೆ ಕಾಪಾಡುವ ಬಗ್ಗೆ ಹಾಗೂ ಟಿಕೆಟ್ಕೊಂಡು ಪ್ರಯಾಣ ಮಾಡುವ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಜನರಿಗೆ ರೇಲ್ವೆ ಆಸ್ತಿ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಹಲವು ನೂತನ ಯೋಜನೆಗಳ ಜಾರಿಗೆ ಸಮಿತಿಯಲ್ಲಿ ಪ್ರಸ್ಥಾವನೆ ಸಲ್ಲಿಸಿದ್ದೇನೆ ಎಂದರು.
ಚೆನ್ನೈ, ಮುಂಬೈ, ದೆಹಲಿಯಂತಹ ರಾಜ್ಯಗಳಲ್ಲಿ ಸಬರ್ಬನ್ ರೈಲು ವ್ಯವಸ್ಥೆ ಇದ್ದು ಬೆಂಗಳೂರಿನಲ್ಲೂ ಇದರ ಜಾರಿಗೆ ಒತ್ತು ನೀಡಲು ಪ್ರಸ್ಥಾವನೆ ಸಲ್ಲಿಸಲಾಗಿದೆ. ಬೆಂಗಳೂರಿನ 70 ಕಿ.ಮೀ. ಪಾಸಲೆಯಲ್ಲಿ ಈ ವ್ಯವಸ್ಥೆ ಜಾರಿಯಾದಲ್ಲಿ ಬಹುತೇಕ ಟ್ರಾಫಿಕ್ ಜಾಂ ತೊಂದರೆ ನೀಗಬಹುದಾಗಿದೆ. ಬೆಳೆಯುತ್ತಿರುವ ಬೆಂಗಳೂರಿನ ಆಡಳಿತದಲ್ಲಿ ರೇಲ್ವೆ ಪ್ರಮುಖ ಪಾತ್ರ ವಹಿಸುತ್ತಿದ್ದು ಸಂಸದರು ಈ ಬಗ್ಗೆ ಮನೆಯಲ್ಲಿ (ಸಂಸತ್ತಿನಲ್ಲಿ) ದನಿ ಎತ್ತಬೇಕಿದೆ ಎಂದರು. ಕರ್ನಾಟಕ ಪ್ರಖ್ಯಾತ ಪ್ರವಾಸಿ ಸ್ಥಳವಾಗಿದ್ದು ಬೆಂಗಳೂರು ರೇಲ್ವೆ ಪ್ರವಾಸಿ ತಾಣ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕೆಂದರು. ಇರುವ ಅಲ್ಪಾವಧಿಯಲ್ಲಿ ಪಕ್ಷ ನೀಡಿದ ಜವಾಬ್ದಾರಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡಲು ರೇಲ್ವೆ ಮಂತ್ರಿ ಖರ್ಗೆಯವರ ಮಾರ್ಗದರ್ಶನದಲ್ಲಿ ರಾಜ್ಯದ ಅಭಿವೃದ್ಧಿಗೆ ಪಣ ತೊಟ್ಟಿರುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

