ಬೆಂಗಳೂರು ಗ್ರಾಮಾಂತರ

ಶಾಶ್ವತ ನೀರಾವರಿಗಾಗಿ ಬೈಕ್ ರ್ಯಾಲಿ

Published On :

ದೊಡ್ಡಬಳ್ಳಾಪುರ: ಶಾಶ್ವತ ನೀರಾವರಿ ಯೋಜನೆಗೆ ಜಾರಿಗೆ ಒತ್ತಾಯಿಸಿ ಇಲ್ಲಿನ ದೊಡ್ಡಬಳ್ಳಾಪುರ ನಗರ ಶಾಶ್ವತ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಬುಧವಾರ ಬೈಕ್ ರ್ಯಾಲಿ ನಡೆಸಲಾಯಿತು.
ನೆಲದಾಂಜನೇಯಸ್ವಾಮಿ ದೇವಾಲಯ ಮುಂಭಾಗದಿಂದ ಹೊರಟ ರ್ಯಾಲಿ ನಗರದ ವಿವಿಧ ಬೀದಿಗಳಲ್ಲಿ ಸಂಚರಿಸಿತು. ನಂತರ ಕನಸವಾಡಿಯಲ್ಲಿ ನಡೆದ ತಾಲೂಕು ಮಟ್ಟದ ಸಮಾವೇಶಕ್ಕೆ ನೂರಾರು ಕಾರ್ಯಕರ್ತರು  ಬೈಕ್‌ಗಳಲ್ಲಿ ತೆರಳಿ ಬೆಂಬಲ ಘೋಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಸರ್ಕಾರ ಯಾವುದೇ ನೆಪ ಹೇಳದೆ ಶಾಶ್ವತ ನೀರಾವರಿ ಜಾರಿಗೆ ಆದ್ಯತೆ ನೀಡಬೇಕು. ತಪ್ಪಿದಲ್ಲಿ ಹೋರಾಟ ಉಗ್ರ ಸ್ವರೂಪ ಪಡೆಯಬೇಕಾದೀತು ಎಂದು ಎಚ್ಚರಿಸಿದರು.
ವಿವಿಧ ಕನ್ನಡಪರ, ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು, ದೊಡ್ಡಬಳ್ಳಾಪುರ ನಗರ ಮತ್ತು ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.