ಬೆಂಗಳೂರು ಗ್ರಾಮಾಂತರ

ಹಾಲು ಉತ್ಪಾದಕರ ಕಲ್ಯಾಣಕ್ಕೆ ಬಮೂಲ್ ಬದ್ಧ

Published On :

ದೊಡ್ಡಬಳ್ಳಾಪುರ: ಬೆಂಗಳೂರು ಹಾಲು ಒಕ್ಕೂಟದ ಬೆಳವಣಿಗೆಯಲ್ಲಿ ಹಾಲು ಉತ್ಪಾದಕ ಸಂಘಗಳು ಮತ್ತು ಹಾಲು ಉತ್ಪಾದಕರ ಪರಿಶ್ರಮ ಮತ್ತು ಸಹಕಾರ ಗಣನೀಯ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಮತ್ತು ಬಮೂಲ್ ನಿರ್ದೇಶಕ ಎನ್.ಹನುಮಂತೇಗೌಡ ಹೇಳಿದರು.
ಇಲ್ಲಿನ ದೊಡ್ಡಬಳ್ಳಾಪುರ ಹಾಲು ಶೀಥಲ ಕೇಂದ್ರ ಆವರಣದಲ್ಲಿ ಬುಧವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು.
ಬಮೂಲ್ ತನ್ನ ಆದಾಯದ ಹೆಚ್ಚು ಪಾಲನ್ನು ಹಾಲು ಉತ್ಪಾದಕರ ಕಲ್ಯಾಣಕ್ಕೆ ಮೀಸಲಿಟ್ಟಿದೆ. ಪ್ರತಿ ತಾಲೂಕಿಗೆ ಪ್ರತಿ ವರ್ಷ 10 ಲಕ್ಷ ರು.ಗಳನ್ನು ಪ್ರತಿಭಾ ಪುರಸ್ಕಾರಕ್ಕಾಗಿ ನೀಡಲಾಗುತ್ತಿದೆ. ಅದೇ ರೀತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಮತ್ತು ಇತರೆ ಕಾರ್ಯಕ್ರಮಗಳಿಗೆ ಸಮಾನ ಅವಕಾಶಗಳನ್ನು ಕೊಟ್ಟಿದ್ದು, ಸಹಕಾರ ತತ್ವದ ಮೂಲ ಆಶಯಗಳಂತೆ ತನ್ನ ಕಾರ್ಯಯೋಜನೆಗಳನ್ನು ವಿಸ್ತರಿಸಿಕೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಬಮೂಲ್ ಉಪವ್ಯವಸ್ಥಾಪಕ ಡಾ.ರುದ್ರೇಶ್, ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ನಡೆಯುತ್ತಿದೆ. ಕಾಲುಬಾಯಿ ಜ್ವರದಿಂದ ಮೃತಪಟ್ಟ ಪ್ರತಿ ಹಸುವಿಗೆ 25 ಸಾವಿರದಂತೆ ರೈತರಿಗೆ ಪರಿಹಾರ ನೀಡಲಾಗುತ್ತಿದೆ.ಇದರಲ್ಲಿ 16400 ರು.ಗಳನ್ನು ಸರ್ಕಾರ ಭರಿಸಿದರೆ ಉಳಿದದ್ದನ್ನು ಒಕ್ಕೂಟ ಭರಿಸುತ್ತಿದೆ. ಅದೇ ರೀತಿ ರೈತರು ಹಸುಗಳಿಗೆ ವಿಮೆ ಮಾಡಿಸಿ. ಬಮೂಲ್ ವ್ಯಾಪ್ತಿಯಲ್ಲಿ ಈಗಾಗಲೇ 1.6 ಲಕ್ಷ ಹಸುಗಳಿವೆ ವಿಮೆಯಾಗಿದೆ ಎಂದು ವಿವರಿಸಿದರು. ನಿವೃತ್ತ ಉಪವ್ಯವಸ್ಥಾಪಕ ಸುಬ್ಬರಾಯಪ್ಪ ಮಾತನಾಡಿದರು.
ಇದೇ ಸಂದರ್ಭದಲ್ಲಿ ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಬಮೂಲ್ ಅಧ್ಯಕ್ಷ ಮಂಜುನಾಥ್, ನಿರ್ದೇಶಕ ಎನ್.ಹನುಮಂತೇಗೌಡ, ಮಾಜಿ ನಿರ್ದೇಶಕ ದಿಬ್ಬೂರು ಜಯಣ್ಣ ಮತ್ತು ಕೃಷ್ಣಮೂರ್ತಿ ಪರ ಮತಯಾಚನೆ ಮಾಡಿದರು.
ಕಾರ್ಯಕ್ರಮದಲ್ಲಿ ಬಮೂಲ್ ಕಲ್ಯಾಣ ಟ್ರಸ್ಟ್‌ನಿಂದ ಹಲವು ವಿದ್ಯಾರ್ಥಿಗಳಿಗೆ ಮತ್ತು ದೊಡ್ಡಬಳ್ಳಾಪುರ ಹಾಲು ಉತ್ಪಾದಕರ ಸಂಘಗಳ ನೌಕರರ ಒಕ್ಕೂಟದ ವತಿಯಿಂದ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ದೊಡ್ಡಬಳ್ಳಾಪುರ ಶೀಥಲ ಕೇಂದ್ರದ ನರಸಿಂಹನ್, ನೌಕರರ ಸಂಘದ ನಾರಾಯಣಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.