ಬೆಂಗಳೂರು ಗ್ರಾಮಾಂತರ

ಅಟಲ್ ಸದೃಢ ಭಾರತ ನಿರ್ಮಾಣದ ಕನಸುಗಾರ

Published On :

ದೊಡ್ಡಬಳ್ಳಾಪುರ: ಅಟಲ್ ಬಿಹಾರಿ ವಾಜಪೇಯಿ ಭಾರತವನ್ನು ಸದೃಢ ರಾಷ್ಟ್ರವಾಗಿ ಕಟ್ಟುವ ಕನಸು ಕಂಡ ಕನಸುಗಾರ. ದೇಶದ ಹಿತಚಿಂತನೆಯಲ್ಲೇ ಸಾರ್ಥಕ ಬದುಕು ಕಾಣುತ್ತಿರುವ ಮುತ್ಸದ್ದಿ ಎಂದು ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಹೇಳಿದರು.
ದೊಡ್ಡಬಳ್ಳಾಪುರ ನಗರ ಮತ್ತು ತಾಲೂಕು ಬಿಜೆಪಿ ನೇತೃತ್ವದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟುಹಬ್ಬದ ಅಂಗವಾಗಿ ಬುಧವಾರ ಬೆಳಗ್ಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಕಸ ಗುಡಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ವಾಜಪೇಯಿ ನಂತರ ದೇಶದ ಸಮಗ್ರ ಅಭಿವೃದ್ಧಿಯ ಚಿಂತನೆಗಳು ಮೋದಿ ಅವರ ಮೂಲಕ ಬರುವ ಆಶಾಭಾವನೆ ಇದೆ. ಇದು ರಾಷ್ಟ್ರದ ಜನ ಆಕಾಂಕ್ಷೆಯೂ ಆಗಿದೆ ಎಂದ ಅವರು, ವಾಜಪೇಯಿ ಹುಟ್ಟುಹಬ್ಬವನ್ನು ಇಂದು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಸ್ಪಚ್ಛತೆಗೆ ಒತ್ತು ನೀಡಿ ಆಸ್ಪತ್ರೆಯನ್ನು ಸ್ವಚ್ಛಗೊಳಿಸುವ ಕೆಲಸ ಮಹತ್ವದ್ದು. ಶುಚಿತ್ವದ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಬರುವ ರೋಗಿಗಳಿಗೆ ರೋಗ ನಿವಾರಣಾ ತಾಣವಾಗಬೇಕಾದ ಆಸ್ಪತ್ರೆಗಳೇ ರೋಗ ಉಂಟು ಮಾಡುವ ಸ್ಥಳಗಳಾಗಿ ಪರಿವರ್ತನೆಯಾಗಬಾರದು. ಈ ಹಂತದಲ್ಲಿ ಬಿಜೆಪಿ ಕಾರ್ಯಕರ್ತರು ಸಾಂಕೇತಿಕವಾಗಿ ಜನರಲ್ಲಿ ಜಾಗೃತಿ ಮತ್ತು ವ್ಯವಸ್ಥೆಯನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ ಎಂದರು. ನಂತರ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆಯ ಶೌಚಾಲಯ, ಆವರಣ, ವಾರ್ಡುಗಳ ಒಳಾವರಣ ಸೇರಿದಂತೆ ಹಲವೆಡೆ ಸ್ವಚ್ಛಗೊಳಿಸುವ ಮೂಲಕ ಗಮನ ಸೆಳೆದರು.
 ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಪುಷ್ಪಾಶಿವಶಂಕರ್, ತಾಲೂಕು ಬಿಜೆಪಿ ಅಧ್ಯಕ್ಷ ಅಶ್ವತ್ಥನಾರಾಯಣಗೌಡ, ಕಾರ್ಯದರ್ಶಿ ನಾಗರಾಜ್, ನಗರಾಧ್ಯಕ್ಷ ಎಚ್.ಎಸ್.ಶಿವಶಂಕರ್, ಕಾರ್ಯದರ್ಶಿ ಮುನಿರಾಜು, ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನಪ್ಪ, ತಾ.ಪಂ ಮಾಜಿ ಅಧ್ಯಕ್ಷ ಡಿ.ನಾಗರಾಜು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವತ್ಸಲ, ಮುಖಂಡರಾದ ಮಹದೇವಯ್ಯ, ಕೆ. ಮೋಹನ್‌ಕುಮಾರ್, ಉಮಾಮಹೇಶ್ವರಿ, ರಾಮಕಿಟ್ಟಿ, ಮುತ್ತಣ್ಣ, ಕಂಬಿ ನಂಜಪ್ಪ ಮತ್ತಿತರರು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.